Gold Silver Price on 19th May: ಚಿನ್ನದ ಬೆಲೆ ಹತ್ತು ದಿನದಲ್ಲಿ ಗ್ರಾಮ್​​ಗೆ 135 ರೂನಷ್ಟು ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2024 May 19th: ಚಿನ್ನದ ಬೆಲೆ ಕಳೆದ ಹತ್ತು ದಿನದಲ್ಲಿ ಗ್ರಾಮ್​ಗೆ 1,135 ರೂಗಳಷ್ಟು ಏರಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,750 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 89.10 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 67,600 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,850 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 19th May: ಚಿನ್ನದ ಬೆಲೆ ಹತ್ತು ದಿನದಲ್ಲಿ ಗ್ರಾಮ್​​ಗೆ 135 ರೂನಷ್ಟು ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ

Updated on: May 19, 2024 | 5:00 AM

ಬೆಂಗಳೂರು, ಮೇ 19: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಈ ವಾರವೂ ಏರಿಳಿತಗಳನ್ನು ಕಂಡಿದೆ. ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4 ರೂನಷ್ಟು ಹೆಚ್ಚಾಗಿದೆ. ಚಿನ್ನವು ಹತ್ತು ದಿನದಲ್ಲಿ ಗ್ರಾಮ್​ಗೆ 135 ರೂನಷ್ಟು ಬೆಲೆ ಹೆಚ್ಚಳ ಕಂಡಿದೆ. ಚಿನ್ನ ಮುಂದಿನ ವಾರವೂ ಇದೇ ರೀತಿಯಲ್ಲಿ ಬೇಡಿಕೆ ಪಡೆಯುವ ನಿರೀಕ್ಷೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,910 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,850 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 19ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,750 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 891 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,750 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 885 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 67,600 ರೂ
  • ಚೆನ್ನೈ: 67,700 ರೂ
  • ಮುಂಬೈ: 67,600 ರೂ
  • ದೆಹಲಿ: 67,750 ರೂ
  • ಕೋಲ್ಕತಾ: 67,600 ರೂ
  • ಕೇರಳ: 67,600 ರೂ
  • ಅಹ್ಮದಾಬಾದ್: 67,650 ರೂ
  • ಜೈಪುರ್: 67,250 ರೂ
  • ಲಕ್ನೋ: 67,250 ರೂ
  • ಭುವನೇಶ್ವರ್: 67,650 ರೂ

ಇದನ್ನೂ ಓದಿ: Forbes 30 Under 30 List: ಫೋರ್ಬ್ಸ್ ಪಟ್ಟಿಯಲ್ಲಿ ಮಿಂಚುತ್ತಿರುವ ಭಾರತೀಯ ಯುವ ಉದ್ಯಮಿಗಳು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,520 ರಿಂಗಿಟ್ (62,573 ರುಪಾಯಿ)
  • ದುಬೈ: 2,672.50 ಡಿರಾಮ್ (60,640 ರುಪಾಯಿ)
  • ಅಮೆರಿಕ: 725 ಡಾಲರ್ (60,410 ರುಪಾಯಿ)
  • ಸಿಂಗಾಪುರ: 996 ಸಿಂಗಾಪುರ್ ಡಾಲರ್ (61,600 ರುಪಾಯಿ)
  • ಕತಾರ್: 2,705 ಕತಾರಿ ರಿಯಾಲ್ (61,830 ರೂ)
  • ಸೌದಿ ಅರೇಬಿಯಾ: 2,740 ಸೌದಿ ರಿಯಾಲ್ (60,880 ರುಪಾಯಿ)
  • ಓಮನ್: 287.50 ಒಮಾನಿ ರಿಯಾಲ್ (62,240 ರುಪಾಯಿ)
  • ಕುವೇತ್: 227 ಕುವೇತಿ ದಿನಾರ್ (61,570 ರುಪಾಯಿ)
  • ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)
  • ಬೆಂಗಳೂರು: 8,850 ರೂ
  • ಚೆನ್ನೈ: 9,250 ರೂ
  • ಮುಂಬೈ: 8,910 ರೂ
  • ದೆಹಲಿ: 8,910 ರೂ
  • ಕೋಲ್ಕತಾ: 8,910 ರೂ
  • ಕೇರಳ: 9,250 ರೂ
  • ಅಹ್ಮದಾಬಾದ್: 8,910 ರೂ
  • ಜೈಪುರ್: 8,910 ರೂ
  • ಲಕ್ನೋ: 8,910 ರೂ
  • ಭುವನೇಶ್ವರ್: 9,250 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us