AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 1st May: ಇನ್ನಷ್ಟು ಅಗ್ಗವಾಗುತ್ತಿದೆ ಚಿನ್ನ; ಬೆಳ್ಳಿ ಬೆಲೆಯೂ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 May 1st: ಭಾರತದಲ್ಲಿ ಚಿನ್ನದ ಬೆಲೆ ಯಥಾಸ್ಥಿತಿ ಇದ್ದರೂ ಕೆಲ ವಿದೇಶಗಳಲ್ಲಿ ಕಡಿಮೆ ಆಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,600 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 83.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,550 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,350 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 1st May: ಇನ್ನಷ್ಟು ಅಗ್ಗವಾಗುತ್ತಿದೆ ಚಿನ್ನ; ಬೆಳ್ಳಿ ಬೆಲೆಯೂ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: May 01, 2024 | 5:00 AM

Share

ಬೆಂಗಳೂರು, ಮೇ 1: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಶಾಂತಗೊಳ್ಳುತ್ತಿವೆ. ಬೆಳ್ಳಿ ಬೆಲೆಯಲ್ಲಿ ಇಂದು ಗ್ರಾಮ್​ಗೆ 50 ಪೈಸೆ ಕಡಿಮೆ ಆಗಿದೆ. ಚಿನ್ನದ ಬೆಲೆ ಕೆಲ ದೇಶಗಳಲ್ಲಿ ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದೆ. ಚೆನ್ನೈ ಬಿಟ್ಟು ಭಾರತದ ಉಳಿದೆಡೆ ಚಿನ್ನದ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ಎರಡು ಮೂರು ವಾರಗಳ ಹಿಂದೆ ಅಸ್ವಾಭಾವಿಕವಾಗಿ ಏರಿದ್ದ ಚಿನ್ನದ ಬೆಲೆ ಮುಂದಿನ ದಿನಗಳಲ್ಲಿ ಕ್ರಮೇಣ ಇಳಿಕೆ ಕಾಣುವ ನಿರೀಕ್ಷೆ ಇದೆ. ಈ ಪ್ರಕ್ರಿಯೆ ಶುರುವಾದಂತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,350 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 1ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,600 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 840 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,600 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 835 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,550 ರೂ
  • ಚೆನ್ನೈ: 67,500 ರೂ
  • ಮುಂಬೈ: 66,550 ರೂ
  • ದೆಹಲಿ: 66,700 ರೂ
  • ಕೋಲ್ಕತಾ: 66,550 ರೂ
  • ಕೇರಳ: 66,550 ರೂ
  • ಅಹ್ಮದಾಬಾದ್: 66,600 ರೂ
  • ಜೈಪುರ್: 66,700 ರೂ
  • ಲಕ್ನೋ: 66,700 ರೂ
  • ಭುವನೇಶ್ವರ್: 66,550 ರೂ

ಇದನ್ನೂ ಓದಿ: ಮೇ ತಿಂಗಳಲ್ಲಿ ಬ್ಯಾಂಕುಗಳಿಗೆ 14 ದಿನ ರಜೆ; ಕಾರ್ಮಿಕರ ದಿನ, ಬಸವ ಜಯಂತಿ ಇತ್ಯಾದಿ ರಜಾ ದಿನಗಳು; ಇಲ್ಲಿದೆ ಪಟ್ಟಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,520 ರಿಂಗಿಟ್ (61,561 ರುಪಾಯಿ)
  • ದುಬೈ: 2,595 ಡಿರಾಮ್ (58,955 ರುಪಾಯಿ)
  • ಅಮೆರಿಕ: 715 ಡಾಲರ್ (59,652 ರುಪಾಯಿ)
  • ಸಿಂಗಾಪುರ: 986 ಸಿಂಗಾಪುರ್ ಡಾಲರ್ (60,440 ರುಪಾಯಿ)
  • ಕತಾರ್: 2,655 ಕತಾರಿ ರಿಯಾಲ್ (60,751 ರೂ)
  • ಸೌದಿ ಅರೇಬಿಯಾ: 2,670 ಸೌದಿ ರಿಯಾಲ್ (59,392 ರುಪಾಯಿ)
  • ಓಮನ್: 281.50 ಒಮಾನಿ ರಿಯಾಲ್ (61,000 ರುಪಾಯಿ)
  • ಕುವೇತ್: 221 ಕುವೇತಿ ದಿನಾರ್ (59,890 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,350 ರೂ
  • ಚೆನ್ನೈ: 8,700 ರೂ
  • ಮುಂಬೈ: 8,350 ರೂ
  • ದೆಹಲಿ: 8,350 ರೂ
  • ಕೋಲ್ಕತಾ: 8,350 ರೂ
  • ಕೇರಳ: 8,700 ರೂ
  • ಅಹ್ಮದಾಬಾದ್: 8,350 ರೂ
  • ಜೈಪುರ್: 8,350 ರೂ
  • ಲಕ್ನೋ: 8,350 ರೂ
  • ಭುವನೇಶ್ವರ್: 8,700 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್