ಬೆಂಗಳೂರು: ಚಿನ್ನದ ಬೆಲೆ ಸತತವಾಗಿ ಇಳಿಯುವುದು ಮುಂದುವರಿದಿದೆ. 10 ಗ್ರಾಮ್ ಚಿನ್ನದ ಬೆಲೆ 300 ರೂನಷ್ಟು ಕುಸಿತ ಕಂಡಿದೆ. ಬೆಳ್ಳಿ ಬೆಲೆಯ ಇಳಿಕೆಯ ಸುದೀರ್ಘ ಹಾದಿ ಬೆಳೆಯುತ್ತಾ ಹೋಗಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಇಳಿಕೆಯಾಗುತ್ತಿರುವುದು ಇದು 5ನೇ ಬಾರಿ. ಈ 10 ದಿನದಲ್ಲಿ 10 ಗ್ರಾಮ್ ಚಿನ್ನದ ಬೆಲೆ 900 ರೂನಷ್ಟು ಇಳಿದಿದೆ. ಬೆಳ್ಳಿ ಬೆಲೆಯೂ 10 ದಿನದಲ್ಲಿ ಏರಿಕೆಯಾಗಿರುವುದು ಒಮ್ಮೆ ಮಾತ್ರ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,870 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,430 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,800 ರುಪಾಯಿಯಲ್ಲಿ ಇದೆ.
ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.
ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
ಇದನ್ನೂ ಓದಿ: RBI: ಆರ್ಬಿಐನಿಂದ ಕೇಂದ್ರಕ್ಕೆ 87,416 ಕೋಟಿ ಡಿವಿಡೆಂಡ್; ರಿಸರ್ವ್ ಬ್ಯಾಂಕ್ಗೆ ಆದಾಯ ಎಲ್ಲಿಂದ? ಇಲ್ಲಿದೆ ಡೀಟೇಲ್ಸ್
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Meta Layoffs: ಅವರ ಬಗ್ಗೆ ಅಭಿಮಾನ ಹೆಚ್ಚಾಯ್ತು; ಕೆಲಸ ಕಳೆದುಕೊಳ್ಳುತ್ತಿರುವ ಉದ್ಯೋಗಿಗಳ ಬಗ್ಗೆ ಮೆಟಾ ಅಧಿಕಾರಿ ಹೇಳಿದ್ದಿದು
(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)