Gold Silver Price on 22nd May: ಚಿನ್ನ, ಬೆಳ್ಳಿ ಎರಡೂ ಬೆಲೆ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 May 22nd: ಚಿನ್ನ, ಬೆಳ್ಳಿ ಎರಡರ ಬೆಲೆಯೂ ಇಂದು ಬುಧವಾರ ಇಳಿದಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 68,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,510 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 94.60 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 68,300 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,250 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 22nd May: ಚಿನ್ನ, ಬೆಳ್ಳಿ ಎರಡೂ ಬೆಲೆ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: May 22, 2024 | 5:00 AM

ಬೆಂಗಳೂರು, ಮೇ 22: ಸತತ ಏರಿಕೆ ಕಾಣುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇಂದು ಬುಧವಾರ ಇಳಿಕೆಯಾಗುವ ಮೂಲಕ ಚಿನ್ನದ ಖರೀದಿದಾರರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ. ಚಿನ್ನದ ಬೆಲೆ ಗ್ರಾಮ್​ಗೆ 60 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ ಬರೋಬ್ಬರಿ 2 ರೂ ಸಮೀಪದಷ್ಟು ಇಳಿಕೆ ಆಗಿದೆ. ಅಮೆರಿಕದಲ್ಲಿ ಹಣದುಬ್ಬರ ಕಡಿಮೆ ಆಗಿದ್ದು ಬಡ್ಡಿದರ ಕಡಿತಗೊಳಿಸುವ ಸುಳಿವು ಇರುವುದರಿಂದ ಚಿನ್ನಕ್ಕೆ ಬೇಡಿಕೆ ಹೆಚ್ಚುವ ನಿರೀಕ್ಷೆ ಇದೆ. ಇವತ್ತು ಬೆಲೆ ಇಳಿಕೆಯಾಗಿರುವುದು ತಾತ್ಕಾಲಿಕ ಇರಬಹುದು. ಮತ್ತೆ ಬೆಲೆ ಏರುವ ಸಾಧ್ಯತೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 68,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,460 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 68,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,250 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 22ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,510 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 946 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,510 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 925 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 68,300 ರೂ
  • ಚೆನ್ನೈ: 68,600 ರೂ
  • ಮುಂಬೈ: 68,300 ರೂ
  • ದೆಹಲಿ: 68,450 ರೂ
  • ಕೋಲ್ಕತಾ: 68,300 ರೂ
  • ಕೇರಳ: 68,300 ರೂ
  • ಅಹ್ಮದಾಬಾದ್: 68,350 ರೂ
  • ಜೈಪುರ್: 68,450 ರೂ
  • ಲಕ್ನೋ: 68,450 ರೂ
  • ಭುವನೇಶ್ವರ್: 68,300 ರೂ

ಇದನ್ನೂ ಓದಿ: ರಷ್ಯಾ ತೈಲಕ್ಕಾಗಿ ಸರ್ಕಾರಿ ಸಂಸ್ಥೆಗಳ ಜೊತೆ ಸೇರಿ ಸಂಧಾನ ನಡೆಸಿ: ರಿಲಾಯನ್ಸ್​ಗೆ ಸರ್ಕಾರ ಮನವಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,600 ರಿಂಗಿಟ್ (63,870 ರುಪಾಯಿ)
  • ದುಬೈ: 2,712.50 ಡಿರಾಮ್ (61,520 ರುಪಾಯಿ)
  • ಅಮೆರಿಕ: 740 ಡಾಲರ್ (61,650 ರುಪಾಯಿ)
  • ಸಿಂಗಾಪುರ: 1016 ಸಿಂಗಾಪುರ್ ಡಾಲರ್ (62,850 ರುಪಾಯಿ)
  • ಕತಾರ್: 2,755 ಕತಾರಿ ರಿಯಾಲ್ (62,960 ರೂ)
  • ಸೌದಿ ಅರೇಬಿಯಾ: 2,760 ಸೌದಿ ರಿಯಾಲ್ (61,310 ರುಪಾಯಿ)
  • ಓಮನ್: 291.50 ಒಮಾನಿ ರಿಯಾಲ್ (63,090 ರುಪಾಯಿ)
  • ಕುವೇತ್: 230 ಕುವೇತಿ ದಿನಾರ್ (62,440 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,250 ರೂ
  • ಚೆನ್ನೈ: 9,900 ರೂ
  • ಮುಂಬೈ: 9,460 ರೂ
  • ದೆಹಲಿ: 9,460 ರೂ
  • ಕೋಲ್ಕತಾ: 9,460 ರೂ
  • ಕೇರಳ: 9,900 ರೂ
  • ಅಹ್ಮದಾಬಾದ್: 9,460 ರೂ
  • ಜೈಪುರ್: 9,460 ರೂ
  • ಲಕ್ನೋ: 9,460 ರೂ
  • ಭುವನೇಶ್ವರ್: 9,900 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us