AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates: ಸಿಂಗಾಪುರದಲ್ಲಿ ತುಸು ಏರಿಕೆ ಬಿಟ್ಟರೆ ಉಳಿದೆಡೆ ಬಹುತೇಕ ಚಿನ್ನದ ಬೆಲೆ ಇಳಿಕೆ; ಭಾರತದ ವಿವಿಧ ನಗರಗಳಲ್ಲಿ ಎಷ್ಟಿದೆ ಚಿನ್ನ, ಬೆಳ್ಳಿ ದರ

Bullion Market 2023, May 23rd: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,290 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,410 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.00 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Rates: ಸಿಂಗಾಪುರದಲ್ಲಿ ತುಸು ಏರಿಕೆ ಬಿಟ್ಟರೆ ಉಳಿದೆಡೆ ಬಹುತೇಕ ಚಿನ್ನದ ಬೆಲೆ ಇಳಿಕೆ; ಭಾರತದ ವಿವಿಧ ನಗರಗಳಲ್ಲಿ ಎಷ್ಟಿದೆ ಚಿನ್ನ, ಬೆಳ್ಳಿ ದರ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 23, 2023 | 5:00 AM

Share

ಮುಖ್ಯಾಂಶಗಳು

  • ಭಾರತದಲ್ಲಿ ಮೇ 23ರಂದು 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ 56,290 ರುಪಾಯಿ. 100 ಗ್ರಾಮ್ ಬೆಳ್ಳಿ ಬೆಲೆ 7,500 ರೂ ಇದೆ.
  • ವಿದೇಶಗಳ ಬಹುತೇಕ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ, ಕೆಲವೆಡೆ ಯಥಾಸ್ಥಿತಿ ಇದೆ.
  • ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,340 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,860 ರೂ ಇದೆ.

ಬೆಂಗಳೂರು: ವೀಕೆಂಡ್​ನಲ್ಲಿ ದಿಢೀರ್ ಏರಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and Silver Price) ಮತ್ತೆ ಇಳಿಕೆಯ ಹಾದಿಗೆ ಬಂದಂತಿದೆ. ಒಂದು ತಿಂಗಳಿಂದಲೂ ಬಹುತೇಕ ಇಳಿಯುತ್ತಿರುವ ಬೆಳ್ಳಿ ಬೆಲೆ ವೀಕೆಂಡ್​ನಲ್ಲಿ 100 ಗ್ರಾಮ್​ಗೆ 100 ರುನಷ್ಟು ಏರಿತ್ತು. ಚಿನ್ನದ ಬೆಲೆ 10 ಗ್ರಾಮ್​ಗೆ 500 ರೂನಷ್ಟು ಹೆಚ್ಚಳ ಆಗಿತ್ತು. ಕಳೆದ 10 ದಿನದಲ್ಲಿ ಚಿನ್ನದ ಬೆಲೆ 3 ಬಾರಿ ಮಾತ್ರ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ 10 ದಿನದಲ್ಲಿ ಏರಿಕೆಯಾಗಿರುವುದು ಒಮ್ಮೆ ಮಾತ್ರ. ಇದೀಗ ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಇಳಿಕೆ ಕಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,290 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,410 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,340 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,860 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ: Rs 1000 notes: ಸಾವಿರ ರೂಪಾಯಿ ನೋಟು ಮತ್ತೆ ಚಲಾವಣೆಗೆ ತರುತ್ತಾರಾ? ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಏನು ಹೇಳ್ತಾರೆ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 23ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,290 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,410 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,340 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,460 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 786 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,340 ರೂ
  • ಚೆನ್ನೈ: 56,750 ರೂ
  • ಮುಂಬೈ: 56,290 ರೂ
  • ದೆಹಲಿ: 56,440 ರೂ
  • ಕೋಲ್ಕತಾ: 56,290 ರೂ
  • ಕೇರಳ: 56,290 ರೂ
  • ಅಹ್ಮದಾಬಾದ್: 56,340 ರೂ
  • ಜೈಪುರ್: 56,440 ರೂ
  • ಲಕ್ನೋ: 56,440 ರೂ
  • ಭುವನೇಶ್ವರ್: 56,290 ರೂ

ಇದನ್ನೂ ಓದಿ: Sukanya Samriddhi Yojana: ತಿಂಗಳಿಗೆ 10,000 ರೂ ಕಟ್ಟಿ, 52 ಲಕ್ಷ ರಿಟರ್ನ್ ಪಡೆಯಿರಿ; ಇದು ಸುಕನ್ಯ ಸಮೃದ್ಧಿ ಯೋಜನೆ ವಿಶೇಷತೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,830 ರಿಂಗಿಟ್ (51,603 ರುಪಾಯಿ)
  • ದುಬೈ: 2220 ಡಿರಾಮ್ (50,076 ರುಪಾಯಿ)
  • ಅಮೆರಿಕ: 600 ಡಾಲರ್ (49,743 ರುಪಾಯಿ)
  • ಸಿಂಗಾಪುರ: 827 ಸಿಂಗಾಪುರ್ ಡಾಲರ್ (50,911 ರುಪಾಯಿ)
  • ಕತಾರ್: 2,285 ಕತಾರಿ ರಿಯಾಲ್ (51,984 ರೂ)
  • ಓಮನ್: 241.50 ಒಮಾನಿ ರಿಯಾಲ್ (52,315 ರುಪಾಯಿ)
  • ಕುವೇತ್: 189 ಕುವೇತಿ ದಿನಾರ್ (51,185 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,860 ರೂ
  • ಚೆನ್ನೈ: 7,860 ರೂ
  • ಮುಂಬೈ: 7,500 ರೂ
  • ದೆಹಲಿ: 7,500 ರೂ
  • ಕೋಲ್ಕತಾ: 7,500 ರೂ
  • ಕೇರಳ: 7,860 ರೂ
  • ಅಹ್ಮದಾಬಾದ್: 7,500 ರೂ
  • ಜೈಪುರ್: 7,500 ರೂ
  • ಲಕ್ನೋ: 7,500 ರೂ
  • ಭುವನೇಶ್ವರ್: 7,860 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್