ಬೆಂಗಳೂರು: ವೀಕೆಂಡ್ನಲ್ಲಿ ದಿಢೀರ್ ಏರಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and Silver Price) ಮತ್ತೆ ಇಳಿಕೆಯ ಹಾದಿಗೆ ಬಂದಂತಿದೆ. ಒಂದು ತಿಂಗಳಿಂದಲೂ ಬಹುತೇಕ ಇಳಿಯುತ್ತಿರುವ ಬೆಳ್ಳಿ ಬೆಲೆ ವೀಕೆಂಡ್ನಲ್ಲಿ 100 ಗ್ರಾಮ್ಗೆ 100 ರುನಷ್ಟು ಏರಿತ್ತು. ಚಿನ್ನದ ಬೆಲೆ 10 ಗ್ರಾಮ್ಗೆ 500 ರೂನಷ್ಟು ಹೆಚ್ಚಳ ಆಗಿತ್ತು. ಕಳೆದ 10 ದಿನದಲ್ಲಿ ಚಿನ್ನದ ಬೆಲೆ 3 ಬಾರಿ ಮಾತ್ರ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ 10 ದಿನದಲ್ಲಿ ಏರಿಕೆಯಾಗಿರುವುದು ಒಮ್ಮೆ ಮಾತ್ರ. ಇದೀಗ ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಇಳಿಕೆ ಕಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,290 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,410 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 56,340 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,860 ರುಪಾಯಿಯಲ್ಲಿ ಇದೆ.
ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.
ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
ಇದನ್ನೂ ಓದಿ: Rs 1000 notes: ಸಾವಿರ ರೂಪಾಯಿ ನೋಟು ಮತ್ತೆ ಚಲಾವಣೆಗೆ ತರುತ್ತಾರಾ? ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಏನು ಹೇಳ್ತಾರೆ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)