AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 23rd May: ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಚಿನ್ನ ಬದಲಾವಣೆ ಇಲ್ಲ; ಇವತ್ತಿನ ದರ ವಿವರ

Bullion Market 2024 May 23rd: ಇವತ್ತು ಗುರುವಾರ ಬೆಳ್ಳಿ ಬೆಲೆಯಲ್ಲಿ ಏರಿಕೆಯಾದರೆ ಚಿನ್ನ ಯಥಾಸ್ಥಿತಿ ಬೆಲೆ ಇದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 68,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,510 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 95.80 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 68,300 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,550 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 23rd May: ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಚಿನ್ನ ಬದಲಾವಣೆ ಇಲ್ಲ; ಇವತ್ತಿನ ದರ ವಿವರ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 23, 2024 | 5:00 AM

Share

ಬೆಂಗಳೂರು, ಮೇ 23: ಬೆಳ್ಳಿ ಬೆಲೆ (Gold and silver Rates) ಇಂದು ಗುರುವಾರ ಸಖತ್ ಏರಿಕೆ ಆಗಿದೆ. ಗ್ರಾಮ್​ಗೆ 1.20 ರೂನಷ್ಟು ಬೆಲೆ ಹೆಚ್ಚಳವಾಗಿದೆ. ಚಿನ್ನದ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. ವಿದೇಶಗಳ ಕೆಲವೆಡೆ ಬೆಲೆ ಕಡಿಮೆ ಆಗಿದೆ. ಮತ್ತೆ ಕೆಲವೆಡೆ ಅಲ್ಪ ಏರಿಕೆ ಆಗಿದೆ. ಅದು ಬಿಟ್ಟರೆ ಚಿನ್ನ ಬಹುತೇಕ ಸ್ಥಿರವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 68,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,580 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 68,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,550 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 23ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,510 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 958 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,510 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 955 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 68,300 ರೂ
  • ಚೆನ್ನೈ: 68,600 ರೂ
  • ಮುಂಬೈ: 68,300 ರೂ
  • ದೆಹಲಿ: 68,450 ರೂ
  • ಕೋಲ್ಕತಾ: 68,300 ರೂ
  • ಕೇರಳ: 68,300 ರೂ
  • ಅಹ್ಮದಾಬಾದ್: 68,350 ರೂ
  • ಜೈಪುರ್: 68,450 ರೂ
  • ಲಕ್ನೋ: 68,450 ರೂ
  • ಭುವನೇಶ್ವರ್: 68,300 ರೂ

ಇದನ್ನೂ ಓದಿ: 40ರ ಬಳಿಕ ಮನೆ ಮಾಡಲು ಹೊರಟಿದ್ದೀರಾ? ಈ ಅಂಶಗಳು ಗಮನದಲ್ಲಿರಲಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,600 ರಿಂಗಿಟ್ (63,840 ರುಪಾಯಿ)
  • ದುಬೈ: 2,707.50 ಡಿರಾಮ್ (61,390 ರುಪಾಯಿ)
  • ಅಮೆರಿಕ: 740 ಡಾಲರ್ (61,630 ರುಪಾಯಿ)
  • ಸಿಂಗಾಪುರ: 1014 ಸಿಂಗಾಪುರ್ ಡಾಲರ್ (62,630 ರುಪಾಯಿ)
  • ಕತಾರ್: 2,770 ಕತಾರಿ ರಿಯಾಲ್ (63,290 ರೂ)
  • ಸೌದಿ ಅರೇಬಿಯಾ: 2,790 ಸೌದಿ ರಿಯಾಲ್ (61,950 ರುಪಾಯಿ)
  • ಓಮನ್: 291.50 ಒಮಾನಿ ರಿಯಾಲ್ (63,070 ರುಪಾಯಿ)
  • ಕುವೇತ್: 231 ಕುವೇತಿ ದಿನಾರ್ (62,680 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,550 ರೂ
  • ಚೆನ್ನೈ: 1,003 ರೂ
  • ಮುಂಬೈ: 9,580 ರೂ
  • ದೆಹಲಿ: 9,580 ರೂ
  • ಕೋಲ್ಕತಾ: 9,580 ರೂ
  • ಕೇರಳ: 1,003 ರೂ
  • ಅಹ್ಮದಾಬಾದ್: 9,580 ರೂ
  • ಜೈಪುರ್: 9,580 ರೂ
  • ಲಕ್ನೋ: 9,580 ರೂ
  • ಭುವನೇಶ್ವರ್: 1,003 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು