AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates: ಚಿನ್ನ ಪ್ರಿಯರಿಗೆ ಸುಗ್ಗಿ, ಎಲ್ಲೆಡೆ ಬೆಲೆ ಇಳಿಕೆ; ದುಬೈ, ಅಮೆರಿಕದಲ್ಲಿ ಮತ್ತೆ 50,000ರೂ ಒಳಗೆ ಬಂದ ಬೆಲೆ; ಎಲ್ಲೆಲ್ಲಿ ಎಷ್ಟಿದೆ ದರ, ಇಲ್ಲಿದೆ ವಿವರ

Bullion Market 2023, May 24th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,100 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.50 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Rates: ಚಿನ್ನ ಪ್ರಿಯರಿಗೆ ಸುಗ್ಗಿ, ಎಲ್ಲೆಡೆ ಬೆಲೆ ಇಳಿಕೆ; ದುಬೈ, ಅಮೆರಿಕದಲ್ಲಿ ಮತ್ತೆ 50,000ರೂ ಒಳಗೆ ಬಂದ ಬೆಲೆ; ಎಲ್ಲೆಲ್ಲಿ ಎಷ್ಟಿದೆ ದರ, ಇಲ್ಲಿದೆ ವಿವರ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 24, 2023 | 5:00 AM

Share

ಮುಖ್ಯಾಂಶಗಳು

  • ಭಾರತದಲ್ಲಿ ಮೇ 24ರಂದು 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ 56,000 ರುಪಾಯಿ. 100 ಗ್ರಾಮ್ ಬೆಳ್ಳಿ ಬೆಲೆ 7,450 ರೂ ಇದೆ.
  • ವಿದೇಶಗಳ ಬಹುತೇಕ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ದುಬೈನಲ್ಲಿ ಭರ್ಜರಿಯಾಗಿ ಬೆಲೆ ಕಡಿಮೆ ಅಗಿದೆ.
  • ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,050 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,800 ರೂ ಇದೆ.

ಬೆಂಗಳೂರು: ಭಾರತ ಹಾಗೂ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ಭರ್ಜರಿಯಾಗಿ ಇಳಿಕೆ ಆಗುತ್ತಿವೆ. ಚಿನ್ನದ ಬೆಲೆ 10 ಗ್ರಾಮ್​ಗೆ 290 ರೂನಷ್ಟು ಕಡಿಮೆ ಆಗಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಏರಿಕೆ ಆಗಿದ್ದು 2 ಬಾರಿ ಮಾತ್ರ. ಬೆಳ್ಳಿಯೂ ಕೂಡ 2 ಬಾರಿ ಮಾತ್ರವೇ ಬೆಲೆ ಏರಿಕೆ ಕಂಡಿದೆ. ಉಳಿದಂತೆ ಚಿನ್ನ ಮತ್ತು ಬೆಲೆಗಳು ಬಹುತೇಕ ಇಳಿದಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,100 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,800 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿGold Loan: ಚಿನ್ನದ ಮೇಲೆ ಸಾಲ; ಬಹಳ ವೇಗ, ಬಹಳ ಸುಲಭ; ಬಡ್ಡಿಯೂ ಕಡಿಮೆ; ಆದರೆ, ಸಾಲ ಪಡೆಯುವ ಮುನ್ನ ಈ ವಿಷಯ ಗಮನಿಸಿರಿ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 24ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,100 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,150 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 780 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,050 ರೂ
  • ಚೆನ್ನೈ: 56,450 ರೂ
  • ಮುಂಬೈ: 56,000 ರೂ
  • ದೆಹಲಿ: 56,150 ರೂ
  • ಕೋಲ್ಕತಾ: 56,000 ರೂ
  • ಕೇರಳ: 56,000 ರೂ
  • ಅಹ್ಮದಾಬಾದ್: 56,050 ರೂ
  • ಜೈಪುರ್: 56,150 ರೂ
  • ಲಕ್ನೋ: 56,150 ರೂ
  • ಭುವನೇಶ್ವರ್: 56,000 ರೂ

ಇದನ್ನೂ ಓದಿGold at Home: ಚಿನ್ನ ಪ್ರಿಯರೇ ಇಲ್ನೋಡಿ..! ಮನೆಯಲ್ಲಿ ನೀವು ಎಷ್ಟು ಚಿನ್ನ ಇಟ್ಟುಕೊಳ್ಳಬಹುದು ಗೊತ್ತಾ? ಸರ್ಕಾರದ ನಿಯಮ ತಿಳಿದಿರಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,830 ರಿಂಗಿಟ್ (51,285 ರುಪಾಯಿ)
  • ದುಬೈ: 2197.50 ಡಿರಾಮ್ (49,557 ರುಪಾಯಿ)
  • ಅಮೆರಿಕ: 600 ಡಾಲರ್ (49,682 ರುಪಾಯಿ)
  • ಸಿಂಗಾಪುರ: 822 ಸಿಂಗಾಪುರ್ ಡಾಲರ್ (50,536 ರುಪಾಯಿ)
  • ಕತಾರ್: 2,265 ಕತಾರಿ ರಿಯಾಲ್ (51,526 ರೂ)
  • ಓಮನ್: 240 ಒಮಾನಿ ರಿಯಾಲ್ (51,624 ರುಪಾಯಿ)
  • ಕುವೇತ್: 188 ಕುವೇತಿ ದಿನಾರ್ (50,662 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,800 ರೂ
  • ಚೆನ್ನೈ: 7,800 ರೂ
  • ಮುಂಬೈ: 7,450 ರೂ
  • ದೆಹಲಿ: 7,450 ರೂ
  • ಕೋಲ್ಕತಾ: 7,450 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,450 ರೂ
  • ಜೈಪುರ್: 7,450 ರೂ
  • ಲಕ್ನೋ: 7,450 ರೂ
  • ಭುವನೇಶ್ವರ್: 7,800 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ