AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 24th May: ಬೆಳ್ಳಿ ಬೆಲೆ ಗ್ರಾಮ್​ಗೆ 3.30 ರೂನಷ್ಟು ಕುಸಿತ; ಚಿನ್ನವೂ ಇಳಿಕೆ

Bullion Market 2024 May 24th: ಇಂದು ಶುಕ್ರವಾರ ಚಿನ್ನ ಮತ್ತು ಬೆಳ್ಳಿ ಎರಡೂ ಕೂಡ ಭರ್ಜರಿ ಬೆಲೆ ಇಳಿಕೆ ಕಂಡಿವೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,420 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 92.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 67,300 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,560 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 24th May: ಬೆಳ್ಳಿ ಬೆಲೆ ಗ್ರಾಮ್​ಗೆ 3.30 ರೂನಷ್ಟು ಕುಸಿತ; ಚಿನ್ನವೂ ಇಳಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 24, 2024 | 5:00 AM

Share

ಬೆಂಗಳೂರು, ಮೇ 24: ನಿನ್ನೆ ಗ್ರಾಮ್​ಗೆ ಒಂದು ರೂ 20 ಪೈಸೆ ಭರ್ಜರಿ ಏರಿಕೆ ಕಂಡಿದ್ದ ಬೆಳ್ಳಿ ಬೆಲೆ (Gold and silver Rates) ಇಂದು ಶುಕ್ರವಾರ ಅದಕ್ಕಿಂತಲೂ ಹೆಚ್ಚು ಕುಸಿತ ಕಂಡಿದೆ. ಗ್ರಾಮ್​ಗೆ ಬರೋಬ್ಬರಿ 3.30 ರೂನಷ್ಟು ಬೆಲೆ ಇಳಿಕೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಬೆಳ್ಳಿ ಬೆಲೆ ಈ ಪರಿ ಇಳಿಕೆ ಆಗಿದ್ದಿಲ್ಲ. ಚಿನ್ನದ ಬೆಲೆಯೂ ಇಂದು ಸಖತ್ ಇಳಿಕೆ ಆಗಿದೆ. ಗ್ರಾಮ್​ಗೆ ಬರೋಬ್ಬರಿ 100 ರೂನಷ್ಟು ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,420 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,560 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 24ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,420 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 925 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,420 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 956 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 67,300 ರೂ
  • ಚೆನ್ನೈ: 67,500 ರೂ
  • ಮುಂಬೈ: 67,300 ರೂ
  • ದೆಹಲಿ: 67,450 ರೂ
  • ಕೋಲ್ಕತಾ: 67,300 ರೂ
  • ಕೇರಳ: 67,300 ರೂ
  • ಅಹ್ಮದಾಬಾದ್: 67,350 ರೂ
  • ಜೈಪುರ್: 67,450 ರೂ
  • ಲಕ್ನೋ: 67,450 ರೂ
  • ಭುವನೇಶ್ವರ್: 67,300 ರೂ

ಇದನ್ನೂ ಓದಿ: ಅಂಬಾನಿ ಮನೆ ಮದುವೆ, ವಿಶೇಷ ಅತಿಥಿಗಳಿಗೆ ಉಡುಗೊರೆ ಕೊಡಲು ಕರೀಂನಗರದಿಂದ ತರಿಸಲಾಗುತ್ತಿದೆ ಬೆಳ್ಳಿ ಫಿಲಿಗ್ರೀ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,560 ರಿಂಗಿಟ್ (62,980 ರುಪಾಯಿ)
  • ದುಬೈ: 2,650 ಡಿರಾಮ್ (60,050 ರುಪಾಯಿ)
  • ಅಮೆರಿಕ: 730 ಡಾಲರ್ (60,760 ರುಪಾಯಿ)
  • ಸಿಂಗಾಪುರ: 996 ಸಿಂಗಾಪುರ್ ಡಾಲರ್ (61,440 ರುಪಾಯಿ)
  • ಕತಾರ್: 2,730 ಕತಾರಿ ರಿಯಾಲ್ (62,340 ರೂ)
  • ಸೌದಿ ಅರೇಬಿಯಾ: 2,710 ಸೌದಿ ರಿಯಾಲ್ (60,140 ರುಪಾಯಿ)
  • ಓಮನ್: 287 ಒಮಾನಿ ರಿಯಾಲ್ (62,070 ರುಪಾಯಿ)
  • ಕುವೇತ್: 227.50 ಕುವೇತಿ ದಿನಾರ್ (61,700 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,560 ರೂ
  • ಚೆನ್ನೈ: 9,700 ರೂ
  • ಮುಂಬೈ: 9,250 ರೂ
  • ದೆಹಲಿ: 9,250 ರೂ
  • ಕೋಲ್ಕತಾ: 9,250 ರೂ
  • ಕೇರಳ: 9,700 ರೂ
  • ಅಹ್ಮದಾಬಾದ್: 9,250 ರೂ
  • ಜೈಪುರ್: 9,250 ರೂ
  • ಲಕ್ನೋ: 9,250 ರೂ
  • ಭುವನೇಶ್ವರ್: 9,700 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More