Gold Silver Price on 25 May: ಏರಿತು ಚಿನ್ನದ ಬೆಲೆ; ಇಳಿಕೆ ನಿಲ್ಲಿಸದ ಬೆಳ್ಳಿ; ದೇಶ ವಿದೇಶಗಳಲ್ಲಿ ಈಗೆಷ್ಟಿದೆ ಚಿನ್ನದ ದರ, ನೋಡಿ ಡೀಟೇಲ್ಸ್

Bullion Market 2023, May 25th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,360 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.05 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 25 May: ಏರಿತು ಚಿನ್ನದ ಬೆಲೆ; ಇಳಿಕೆ ನಿಲ್ಲಿಸದ ಬೆಳ್ಳಿ; ದೇಶ ವಿದೇಶಗಳಲ್ಲಿ ಈಗೆಷ್ಟಿದೆ ಚಿನ್ನದ ದರ, ನೋಡಿ ಡೀಟೇಲ್ಸ್
ಚಿನ್ನ

Updated on: May 25, 2023 | 4:58 AM

ಬೆಂಗಳೂರು: ಭಾರತ ಹಾಗೂ ವಿದೇಶಗಳಲ್ಲಿ ಚಿನ್ನದ ಬೆಲೆ (Gold and Silver Prices) ಮತ್ತೆ ಏರುಗತಿಗೆ ಬಂದಿದೆ. ಬಹುತೇಕ ವಿದೇಶ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಏರಿದೆ. ಆದರೆ, ಬೆಳ್ಳಿ ಬೆಲೆ ಕಳೆದ ಒಂದು ತಿಂಗಳಿಂದಲೂ ಬಹುತೇಕ ಇಳಿಕೆಯ ಹಾದಿಯಲ್ಲಿದ್ದು, ಅದೇ ಇನ್ನೂ ಮುಂದುವರಿಯುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,360 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,405 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,750 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿPF Advance: ಮನೆ ನಿರ್ಮಾಣಕ್ಕೆ ಪಿಎಫ್ ಅಡ್ವಾನ್ಸ್ ಪಡೆಯುವುದು ಹೇಗೆ? ಇಲ್ಲಿದೆ ವಿಧಾನ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 25ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,360 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740.50 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,410 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 775 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,300 ರೂ
  • ಚೆನ್ನೈ: 56,650 ರೂ
  • ಮುಂಬೈ: 56,250 ರೂ
  • ದೆಹಲಿ: 56,400 ರೂ
  • ಕೋಲ್ಕತಾ: 56,250 ರೂ
  • ಕೇರಳ: 56,250 ರೂ
  • ಅಹ್ಮದಾಬಾದ್: 56,300 ರೂ
  • ಜೈಪುರ್: 56,400 ರೂ
  • ಲಕ್ನೋ: 56,400 ರೂ
  • ಭುವನೇಶ್ವರ್: 56,250 ರೂ

ಇದನ್ನೂ ಓದಿArecanut Price 24 ಮೇ: ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,850 ರಿಂಗಿಟ್ (51,263 ರುಪಾಯಿ)
  • ದುಬೈ: 2215 ಡಿರಾಮ್ (49,837 ರುಪಾಯಿ)
  • ಅಮೆರಿಕ: 605 ಡಾಲರ್ (50,025 ರುಪಾಯಿ)
  • ಸಿಂಗಾಪುರ: 827 ಸಿಂಗಾಪುರ್ ಡಾಲರ್ (50,713 ರುಪಾಯಿ)
  • ಕತಾರ್: 2,280 ಕತಾರಿ ರಿಯಾಲ್ (51,716 ರೂ)
  • ಓಮನ್: 241.50 ಒಮಾನಿ ರಿಯಾಲ್ (51,864 ರುಪಾಯಿ)
  • ಕುವೇತ್: 189 ಕುವೇತಿ ದಿನಾರ್ (50,790 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,750 ರೂ
  • ಚೆನ್ನೈ: 7,750 ರೂ
  • ಮುಂಬೈ: 7,405 ರೂ
  • ದೆಹಲಿ: 7,405 ರೂ
  • ಕೋಲ್ಕತಾ: 7,405 ರೂ
  • ಕೇರಳ: 7,750 ರೂ
  • ಅಹ್ಮದಾಬಾದ್: 7,405 ರೂ
  • ಜೈಪುರ್: 7,450 ರೂ
  • ಲಕ್ನೋ: 7,450 ರೂ
  • ಭುವನೇಶ್ವರ್: 7,405 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us