ಬೆಂಗಳೂರು, ಮೇ 26: ಬೆಲೆ ಇಳಿಕೆಯಲ್ಲಿ ಚಿನ್ನ, ಬೆಳ್ಳಿ ನಡುವೆ ಪೈಪೋಟಿ ಬಿದ್ದಂತಿದೆ. ಮೊನ್ನೆ ಗ್ರಾಮ್ಗೆ ಬರೋಬ್ಬರಿ 3.30 ರೂನಷ್ಟು ಬೆಳ್ಳಿ ಬೆಲೆ ಇಳಿಕೆಯಾಗಿದ್ದರೆ, ಈಗ ಚಿನ್ನದ ಬೆಲೆ (Gold and silver Rates) ಗ್ರಾಮ್ಗೆ 90 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ ಐವತ್ತು ಪೈಸೆ ಇಳಿದಿದೆ. ಭಾರತದಲ್ಲಿ ಮಾತ್ರವಲ್ಲ, ಜಾಗತಿಕವಾಗಿಯೂ ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿದೆ. ಈಗ ಇಳಿಕೆಯಾದರೂ ಕಳೆದ 10 ದಿನದಲ್ಲಿ ಆಗಿರುವ ಏರಿಕೆ ಗಮನಿಸಿದರೆ ಬೆಳ್ಳಿ ಬೆಲೆಯಲ್ಲಿ ಗ್ರಾಮ್ಗೆ 4.4 ರೂನಷ್ಟು ಹೆಚ್ಚಳವಾಗಿದೆ. ಚಿನ್ನದ ಬೆಲೆಯಲ್ಲಿ 75 ರೂನಷ್ಟು ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,300 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,420 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 67,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,560 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಕಂಪನಿ ಮಾರುವಂತೆ ಮಾಡಿದ್ರು… 2014ರ ಹಿಂದಿನ ದಿನಗಳನ್ನು ಸ್ಮರಿಸಿ ಮರುಗಿದ ಉದ್ಯಮಿ ಶಿವಶಂಕರನ್
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ