Gold Silver Price on 27th May: ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 May 27th: ಚಿನ್ನ, ಬೆಳ್ಳಿ ಬೆಲೆಗಳಲ್ಲಿ ಅಲ್ಪ ಇಳಿಕೆ ಆಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,440 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 91.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,400 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,200 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 27th May: ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: May 27, 2024 | 5:00 AM

ಬೆಂಗಳೂರು, ಮೇ 27: ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and silver Rates) ಇಳಿಕೆ ಈ ವಾರವೂ ಮುಂದುವರಿಯುವಂತಿದೆ. ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. ಹಿಂದಿನ ಎರಡು ತಿಂಗಳಲ್ಲಿ ಭರ್ಜರಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯ ಹೊಯ್ದಾಟ ಕಡಿಮೆ ಆಗುವ ಲಕ್ಷಣ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,440 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,200 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 27ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,440 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 915 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,440 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 920 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,400 ರೂ
  • ಚೆನ್ನೈ: 66,550 ರೂ
  • ಮುಂಬೈ: 66,400 ರೂ
  • ದೆಹಲಿ: 66,550 ರೂ
  • ಕೋಲ್ಕತಾ: 66,400 ರೂ
  • ಕೇರಳ: 66,400 ರೂ
  • ಅಹ್ಮದಾಬಾದ್: 66,450 ರೂ
  • ಜೈಪುರ್: 66,550 ರೂ
  • ಲಕ್ನೋ: 66,550 ರೂ
  • ಭುವನೇಶ್ವರ್: 66,400 ರೂ

ಇದನ್ನೂ ಓದಿ: ದೇಶದ ಜಿಡಿಪಿಗೆ ಅರ್ಧದಷ್ಟು ಕೊಡುಗೆ ಕೊಡುತ್ತವೆ ಈ 13 ನಗರಗಳು; ಬೆಂಗಳೂರಿಗೆ ಎಷ್ಟನೇ ಸ್ಥಾನ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,490 ರಿಂಗಿಟ್ (61,520 ರುಪಾಯಿ)
  • ದುಬೈ: 2,617.50 ಡಿರಾಮ್ (59,190 ರುಪಾಯಿ)
  • ಅಮೆರಿಕ: 715 ಡಾಲರ್ (59,390 ರುಪಾಯಿ)
  • ಸಿಂಗಾಪುರ: 984 ಸಿಂಗಾಪುರ್ ಡಾಲರ್ (60,550 ರುಪಾಯಿ)
  • ಕತಾರ್: 2,665 ಕತಾರಿ ರಿಯಾಲ್ (60,730 ರೂ)
  • ಸೌದಿ ಅರೇಬಿಯಾ: 2,680 ಸೌದಿ ರಿಯಾಲ್ (59,350 ರುಪಾಯಿ)
  • ಓಮನ್: 282.50 ಒಮಾನಿ ರಿಯಾಲ್ (60,960 ರುಪಾಯಿ)
  • ಕುವೇತ್: 222.50 ಕುವೇತಿ ದಿನಾರ್ (60,200 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,200 ರೂ
  • ಚೆನ್ನೈ: 9,600 ರೂ
  • ಮುಂಬೈ: 9,150 ರೂ
  • ದೆಹಲಿ: 9,150 ರೂ
  • ಕೋಲ್ಕತಾ: 9,150 ರೂ
  • ಕೇರಳ: 9,600 ರೂ
  • ಅಹ್ಮದಾಬಾದ್: 9,150 ರೂ
  • ಜೈಪುರ್: 9,150 ರೂ
  • ಲಕ್ನೋ: 9,150 ರೂ
  • ಭುವನೇಶ್ವರ್: 9,600 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us