AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 28th May: ಚಿನ್ನದ ಬೆಲೆ ಗ್ರಾಮ್​ಗೆ 25 ರೂ ಜಾಸ್ತಿ, ಬೆಳ್ಳಿಯೂ ದುಬಾರಿ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 May 28th: ಚಿನ್ನ ಮತ್ತು ಬೆಳ್ಳಿ ಬೆಲೆ ಮಂಗಳವಾರ ಏರಿಕೆ ಆಗಿವೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,710 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 93 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,650 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,325 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 28th May: ಚಿನ್ನದ ಬೆಲೆ ಗ್ರಾಮ್​ಗೆ 25 ರೂ ಜಾಸ್ತಿ, ಬೆಳ್ಳಿಯೂ ದುಬಾರಿ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 28, 2024 | 5:00 AM

Share

ಬೆಂಗಳೂರು, ಮೇ 28: ಕಳೆದ ವಾರ ಒಂದಷ್ಟು ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಇಂದು ಮಂಗಳವಾರ ಹೆಚ್ಚಾಗಿವೆ. ಚಿನ್ನದ ಬೆಲೆ 10 ಗ್ರಾಮ್​ಗೆ 250 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆ ಒಂದು ಕಿಲೋಗೆ ಒಂದೂವರೆ ಸಾವಿರ ರೂನಷ್ಟು ಏರಿಕೆ ಆಗಿದೆ. ವಿದೇಶಗಳಲ್ಲಿ ಬಹುತೇಕ ಕಡೆ ಚಿನ್ನದ ಬೆಲೆಯಲ್ಲಿ ಯಥಾಸ್ಥಿತಿ ಇದೆ. ಕೆಲ ಕಡೆ ಮಾತ್ರ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,325 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 28ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,710 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 932.50 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,710 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 930 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,650 ರೂ
  • ಚೆನ್ನೈ: 67,200 ರೂ
  • ಮುಂಬೈ: 66,650 ರೂ
  • ದೆಹಲಿ: 66,800 ರೂ
  • ಕೋಲ್ಕತಾ: 66,650 ರೂ
  • ಕೇರಳ: 66,650 ರೂ
  • ಅಹ್ಮದಾಬಾದ್: 66,700 ರೂ
  • ಜೈಪುರ್: 66,800 ರೂ
  • ಲಕ್ನೋ: 66,800 ರೂ
  • ಭುವನೇಶ್ವರ್: 66,650 ರೂ

ಇದನ್ನೂ ಓದಿ: ನಿಶ್ಚಿತ ಠೇವಣಿಗೆ ಶೇ. 9.1ರವರೆಗೂ ಬಡ್ಡಿ; ಇತ್ತೀಚೆಗೆ ದರ ಪರಿಷ್ಕರಿಸಿದ ಬ್ಯಾಂಕುಗಳು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,490 ರಿಂಗಿಟ್ (61,760 ರುಪಾಯಿ)
  • ದುಬೈ: 2,630 ಡಿರಾಮ್ (59,530 ರುಪಾಯಿ)
  • ಅಮೆರಿಕ: 715 ಡಾಲರ್ (59,440 ರುಪಾಯಿ)
  • ಸಿಂಗಾಪುರ: 984 ಸಿಂಗಾಪುರ್ ಡಾಲರ್ (60,610 ರುಪಾಯಿ)
  • ಕತಾರ್: 2,675 ಕತಾರಿ ರಿಯಾಲ್ (61,010 ರೂ)
  • ಸೌದಿ ಅರೇಬಿಯಾ: 2,680 ಸೌದಿ ರಿಯಾಲ್ (59,400 ರುಪಾಯಿ)
  • ಓಮನ್: 283.50 ಒಮಾನಿ ರಿಯಾಲ್ (61,220 ರುಪಾಯಿ)
  • ಕುವೇತ್: 222.50 ಕುವೇತಿ ದಿನಾರ್ (60,270 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,325 ರೂ
  • ಚೆನ್ನೈ: 9,750 ರೂ
  • ಮುಂಬೈ: 9,300 ರೂ
  • ದೆಹಲಿ: 9,300 ರೂ
  • ಕೋಲ್ಕತಾ: 9,300 ರೂ
  • ಕೇರಳ: 9,750 ರೂ
  • ಅಹ್ಮದಾಬಾದ್: 9,300 ರೂ
  • ಜೈಪುರ್: 9,300 ರೂ
  • ಲಕ್ನೋ: 9,300 ರೂ
  • ಭುವನೇಶ್ವರ್: 9,750 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ