Gold Silver Price on 29 May: ದುಬೈನಲ್ಲಿ ಇನ್ನಷ್ಟು ಇಳಿದ ಚಿನ್ನದ ಬೆಲೆ; ಇವತ್ತು ಭಾರತ ಹಾಗೂ ವಿದೇಶಗಳಲ್ಲಿ ಎಷ್ಟೆಷ್ಟಿದೆ ಬೆಲೆ, ಇಲ್ಲಿದೆ ಡೀಟೇಲ್ಸ್

Bullion Market 2023, May 29th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,600 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 29 May: ದುಬೈನಲ್ಲಿ ಇನ್ನಷ್ಟು ಇಳಿದ ಚಿನ್ನದ ಬೆಲೆ; ಇವತ್ತು ಭಾರತ ಹಾಗೂ ವಿದೇಶಗಳಲ್ಲಿ ಎಷ್ಟೆಷ್ಟಿದೆ ಬೆಲೆ, ಇಲ್ಲಿದೆ ಡೀಟೇಲ್ಸ್
ಚಿನ್ನ

Updated on: May 29, 2023 | 5:00 AM

ಬೆಂಗಳೂರು: ಕಳೆದ ವಾರ ಭರ್ಜರಿಯಾಗಿ ಇಳಿದಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ವಾರಾಂತ್ಯದಲ್ಲಿ ಸುಧಾರಿಸಿಕೊಂಡಿವೆ. ಚಿನ್ನದ ಬೆಲೆ ಇದೀಗ ಇನ್ನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ ಅಪರೂಪಕ್ಕೆ ತುಸು ಹೆಚ್ಚಿಸಿಕೊಂಡಿದೆ.. ಬಹುತೇಕ ದೇಶ ವಿದೇಶ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಇಳಿದಿದೆ. ಅಮೆರಿಕ ಮತ್ತು ದುಬೈನಲ್ಲಿ ಚಿನ್ನದ ಬೆಲೆ 50,000 ರೂ ಮಟ್ಟಕ್ಕಿಂತ ಕಡಿಮೆಗೆ ಇಳಿದಿದೆ. ಸಿಂಗಾಪುರ, ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,700 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿInspiring Story: ಶಾಲೆ ಓದುವಾಗಲೇ ಕಂಪನಿಯ ಸಿಇಒ; ಶಾಲೆಯ ಬಾತ್​ರೂಮೇ ಮೀಟಿಂಗ್ ಸೆಂಟರ್; 15 ವರ್ಷದ ಎರಿಕ್ ಝು ಕಥೆ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 29ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,600 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,600 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 770 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,600 ರೂ
  • ಚೆನ್ನೈ: 55,940 ರೂ
  • ಮುಂಬೈ: 55,550 ರೂ
  • ದೆಹಲಿ: 55,700 ರೂ
  • ಕೋಲ್ಕತಾ: 55,550 ರೂ
  • ಕೇರಳ: 55,550 ರೂ
  • ಅಹ್ಮದಾಬಾದ್: 55,600 ರೂ
  • ಜೈಪುರ್: 55,700 ರೂ
  • ಲಕ್ನೋ: 55,700 ರೂ
  • ಭುವನೇಶ್ವರ್: 55,550 ರೂ

ಇದನ್ನೂ ಓದಿHigh Risk: ಸೇವಿಂಗ್ಸ್ ಸ್ಕೀಮ್​ಗೆ 10 ಲಕ್ಷಕ್ಕೂ ಹೆಚ್ಚು ಹಣ ಹೂಡಿಕೆ ಮಾಡುತ್ತೀರಾ? ಈ ಹೊಸ ನಿಯಮಗಳು ತಿಳಿದಿರಲಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,850 ರಿಂಗಿಟ್ (51,183 ರುಪಾಯಿ)
  • ದುಬೈ: 2182.50 ಡಿರಾಮ್ (49,070 ರುಪಾಯಿ)
  • ಅಮೆರಿಕ: 595 ಡಾಲರ್ (49,211 ರುಪಾಯಿ)
  • ಸಿಂಗಾಪುರ: 819 ಸಿಂಗಾಪುರ್ ಡಾಲರ್ (50,044 ರುಪಾಯಿ)
  • ಕತಾರ್: 2,250 ಕತಾರಿ ರಿಯಾಲ್ (51,049 ರೂ)
  • ಓಮನ್: 238 ಒಮಾನಿ ರಿಯಾಲ್ (51,049 ರುಪಾಯಿ)
  • ಕುವೇತ್: 187 ಕುವೇತಿ ದಿನಾರ್ (50,232 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,700 ರೂ
  • ಚೆನ್ನೈ: 7,700 ರೂ
  • ಮುಂಬೈ: 7,300 ರೂ
  • ದೆಹಲಿ: 7,300 ರೂ
  • ಕೋಲ್ಕತಾ: 7,300 ರೂ
  • ಕೇರಳ: 7,700 ರೂ
  • ಅಹ್ಮದಾಬಾದ್: 7,300 ರೂ
  • ಜೈಪುರ್: 7,300 ರೂ
  • ಲಕ್ನೋ: 7,300 ರೂ
  • ಭುವನೇಶ್ವರ್: 7,700 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us