AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates: ಚಿನ್ನ ಮತ್ತು ಬೆಳ್ಳಿ ಇನ್ನಷ್ಟು ಅಗ್ಗ; ಭಾರತ ಹಾಗೂ ವಿದೇಶಗಳಲ್ಲಿ ಚಿನ್ನದ ದರ ಎಷ್ಟು ಇಳಿದಿದೆ, ನೋಡಿ ಡೀಟೇಲ್ಸ್

Bullion Market 2023, May 2nd: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,700 ರುಪಾಯಿಗೆ ಇಳಿದಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,760 ರುಪಾಯಿಗೆ ಇಳಿದಿದೆ. ಬೆಳ್ಳಿ ಬೆಲೆ ಭಾರತದಲ್ಲಿ ಗ್ರಾಮ್​ಗೆ 76 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Rates: ಚಿನ್ನ ಮತ್ತು ಬೆಳ್ಳಿ ಇನ್ನಷ್ಟು ಅಗ್ಗ; ಭಾರತ ಹಾಗೂ ವಿದೇಶಗಳಲ್ಲಿ ಚಿನ್ನದ ದರ ಎಷ್ಟು ಇಳಿದಿದೆ, ನೋಡಿ ಡೀಟೇಲ್ಸ್
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 02, 2023 | 5:00 AM

Share

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಯ ಇಳಿಮುಖ ಮುಂದುವರಿಯುತ್ತಿದೆ. ಮೇ 1 ಮತ್ತು 2ರಂದು ಈ ಎರಡೂ ಲೋಹಗಳ ಬೆಲೆ ಇಳಿಕೆ ಕಂಡಿದೆ. ಕಳೆದ ಒಂದು ವಾರದಿಂದಲೂ ಚಿನ್ನ ಮತ್ತು ಬೆಳ್ಳಿ (Gold and Silver Price) ದುಬಾರಿಯಾಗಿಲ್ಲ ಎಂಬುದು ಒಡವೆ ಪ್ರಿಯರಿಗೆ ಖುಷಿ ತಂದಿದೆ. ಅಕ್ಷಯ ತೃತೀಯ ದಿನದಿಂದಲೂ ಚಿನ್ನದ ಬೆಲೆ ಬಹುತೇಕ ಇಳಿಕೆಯ ಹಾದಿಯಲ್ಲಿದೆ. ಭಾರತ ಹಾಗೂ ವಿದೇಶಗಳ ಚಿನಿವಾರ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಅಷ್ಟೊಂದು ಏರಿಳಿತಗಳಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,760 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,020 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿInspiring: ಅಪ್ಪನ ಆಸ್ತಿ ಇಲ್ಲ; ಓದೋದು ಬಿಟ್ಟು ಕೇವಲ 23ರ ವಯಸ್ಸಿಗೆ 100 ಕೋಟಿ ಒಡೆಯನಾದ ಸಂಕರ್ಷ್

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 2ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,760 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,810 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 802 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,750 ರೂ
  • ಚೆನ್ನೈ: 56,300 ರೂ
  • ಮುಂಬೈ: 55,700 ರೂ
  • ದೆಹಲಿ: 55,850 ರೂ
  • ಕೋಲ್ಕತಾ: 55,700 ರೂ
  • ಕೇರಳ: 55,700 ರೂ
  • ಅಹ್ಮದಾಬಾದ್: 55,750 ರೂ
  • ಜೈಪುರ್: 56,850 ರೂ
  • ಲಕ್ನೋ: 56,850 ರೂ
  • ಭುವನೇಶ್ವರ್: 55,700 ರೂ

ಇದನ್ನೂ ಓದಿWipro Half-Salary: ವಿಪ್ರೋದಲ್ಲಿ ಅರ್ಧಸಂಬಳ; ಕೆಲಸಕ್ಕೆ ಸೇರಿದವರೆಷ್ಟು? ಆಫರ್ ತಿರಸ್ಕರಿಸಿದವರೆಷ್ಟು?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,840 ರಿಂಗಿಟ್ (52,127 ರುಪಾಯಿ)
  • ದುಬೈ: 2222.50 ಡಿರಾಮ್ (49,483 ರುಪಾಯಿ)
  • ಅಮೆರಿಕ: 610 ಡಾಲರ್ (49,868 ರುಪಾಯಿ)
  • ಸಿಂಗಾಪುರ: 827 ಸಿಂಗಾಪುರ್ ಡಾಲರ್ (50,507 ರುಪಾಯಿ)
  • ಕತಾರ್: 2,285 ಕತಾರಿ ರಿಯಾಲ್ (51,303 ರೂ)
  • ಓಮನ್: 242.50 ಒಮಾನಿ ರಿಯಾಲ್ (51,415 ರುಪಾಯಿ)
  • ಕುವೇತ್: 190 ಕುವೇತಿ ದಿನಾರ್ (51,174 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,020 ರೂ
  • ಚೆನ್ನೈ: 8,020 ರೂ
  • ಮುಂಬೈ: 7,600 ರೂ
  • ದೆಹಲಿ: 7,600 ರೂ
  • ಕೋಲ್ಕತಾ: 7,600 ರೂ
  • ಕೇರಳ: 8,020 ರೂ
  • ಅಹ್ಮದಾಬಾದ್: 7,600 ರೂ
  • ಜೈಪುರ್: 7,600 ರೂ
  • ಲಕ್ನೋ: 7,600 ರೂ
  • ಭುವನೇಶ್ವರ್: 8,020 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ