ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಯ ಇಳಿಮುಖ ಮುಂದುವರಿಯುತ್ತಿದೆ. ಮೇ 1 ಮತ್ತು 2ರಂದು ಈ ಎರಡೂ ಲೋಹಗಳ ಬೆಲೆ ಇಳಿಕೆ ಕಂಡಿದೆ. ಕಳೆದ ಒಂದು ವಾರದಿಂದಲೂ ಚಿನ್ನ ಮತ್ತು ಬೆಳ್ಳಿ (Gold and Silver Price) ದುಬಾರಿಯಾಗಿಲ್ಲ ಎಂಬುದು ಒಡವೆ ಪ್ರಿಯರಿಗೆ ಖುಷಿ ತಂದಿದೆ. ಅಕ್ಷಯ ತೃತೀಯ ದಿನದಿಂದಲೂ ಚಿನ್ನದ ಬೆಲೆ ಬಹುತೇಕ ಇಳಿಕೆಯ ಹಾದಿಯಲ್ಲಿದೆ. ಭಾರತ ಹಾಗೂ ವಿದೇಶಗಳ ಚಿನಿವಾರ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಅಷ್ಟೊಂದು ಏರಿಳಿತಗಳಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,700 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,760 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,020 ರುಪಾಯಿಯಲ್ಲಿ ಇದೆ.
ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.
ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
ಇದನ್ನೂ ಓದಿ: Inspiring: ಅಪ್ಪನ ಆಸ್ತಿ ಇಲ್ಲ; ಓದೋದು ಬಿಟ್ಟು ಕೇವಲ 23ರ ವಯಸ್ಸಿಗೆ 100 ಕೋಟಿ ಒಡೆಯನಾದ ಸಂಕರ್ಷ್
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Wipro Half-Salary: ವಿಪ್ರೋದಲ್ಲಿ ಅರ್ಧಸಂಬಳ; ಕೆಲಸಕ್ಕೆ ಸೇರಿದವರೆಷ್ಟು? ಆಫರ್ ತಿರಸ್ಕರಿಸಿದವರೆಷ್ಟು?
(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)