Gold Silver Price on 2nd May: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ; ಬೆಳ್ಳಿ ಇನ್ನಷ್ಟು ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 May 2nd: ಭಾರತ ಹಾಗೂ ವಿವಿಧ ದೇಶಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,510 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 83 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 65,550 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,340 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 2nd May: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ; ಬೆಳ್ಳಿ ಇನ್ನಷ್ಟು ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: May 02, 2024 | 5:00 AM

ಬೆಂಗಳೂರು, ಮೇ 2: ಅಸ್ವಾಭಾವಿಕವಾಗಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಕಡಿಮೆ ಆಗುತ್ತಿರುವ ಪ್ರಕ್ರಿಯೆ ಮುಂದುವರಿಯುತ್ತಿದೆ. ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ ನೂರು ರೂನಷ್ಟು ಇಳಿಕೆ ಕಂಡಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ ಐವತ್ತು ಪೈಸೆ ಕಡಿಮೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ, ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ಚಿನ್ನದ ಬೆಲೆ ಕುಸಿತವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 65,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,340 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 2ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,510 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 830 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,550 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 834 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 65,550 ರೂ
  • ಚೆನ್ನೈ: 66,350 ರೂ
  • ಮುಂಬೈ: 65,550 ರೂ
  • ದೆಹಲಿ: 65,700 ರೂ
  • ಕೋಲ್ಕತಾ: 65,550 ರೂ
  • ಕೇರಳ: 65,550 ರೂ
  • ಅಹ್ಮದಾಬಾದ್: 65,600 ರೂ
  • ಜೈಪುರ್: 65,700 ರೂ
  • ಲಕ್ನೋ: 65,700 ರೂ
  • ಭುವನೇಶ್ವರ್: 65,550 ರೂ

ಇದನ್ನೂ ಓದಿ: ಏಪ್ರಿಲ್​ನಲ್ಲಿ ದಾಖಲೆ ಜಿಎಸ್​ಟಿ ಸಂಗ್ರಹ; ತಮಿಳುನಾಡನ್ನು ಮೀರಿಸಿದ ಉತ್ತರಪ್ರದೇಶ; ಕರ್ನಾಟಕದಲ್ಲಿ ಸಂಗ್ರಹವಾದ ತೆರಿಗೆ ಇಷ್ಟು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,450 ರಿಂಗಿಟ್ (60,376 ರುಪಾಯಿ)
  • ದುಬೈ: 2,562.50 ಡಿರಾಮ್ (58,269 ರುಪಾಯಿ)
  • ಅಮೆರಿಕ: 700 ಡಾಲರ್ (58,442 ರುಪಾಯಿ)
  • ಸಿಂಗಾಪುರ: 972 ಸಿಂಗಾಪುರ್ ಡಾಲರ್ (59,457 ರುಪಾಯಿ)
  • ಕತಾರ್: 2,620 ಕತಾರಿ ರಿಯಾಲ್ (59,988 ರೂ)
  • ಸೌದಿ ಅರೇಬಿಯಾ: 2,630 ಸೌದಿ ರಿಯಾಲ್ (58,544 ರುಪಾಯಿ)
  • ಓಮನ್: 276.50 ಒಮಾನಿ ರಿಯಾಲ್ (59,962 ರುಪಾಯಿ)
  • ಕುವೇತ್: 218 ಕುವೇತಿ ದಿನಾರ್ (59,057 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,340 ರೂ
  • ಚೆನ್ನೈ: 8,650 ರೂ
  • ಮುಂಬೈ: 8,300 ರೂ
  • ದೆಹಲಿ: 8,300 ರೂ
  • ಕೋಲ್ಕತಾ: 8,300 ರೂ
  • ಕೇರಳ: 8,650 ರೂ
  • ಅಹ್ಮದಾಬಾದ್: 8,300 ರೂ
  • ಜೈಪುರ್: 8,300 ರೂ
  • ಲಕ್ನೋ: 8,300 ರೂ
  • ಭುವನೇಶ್ವರ್: 8,650 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು