AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 30 May: ಅಮೆರಿಕ, ದುಬೈ ಬಳಿಕ ಸಿಂಗಾಪುರದಲ್ಲೂ ಚಿನ್ನದ ಬೆಲೆ 50,000 ರೂಗಿಂತ ಕಡಿಮೆ; ಭಾರತದಲ್ಲಿ ಎಷ್ಟಿದೆ ಚಿನ್ನದ ದರ? ನೋಡಿ ಡಿಟೇಲ್ಸ್

Bullion Market 2023, May 30th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,600 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 30 May: ಅಮೆರಿಕ, ದುಬೈ ಬಳಿಕ ಸಿಂಗಾಪುರದಲ್ಲೂ ಚಿನ್ನದ ಬೆಲೆ 50,000 ರೂಗಿಂತ ಕಡಿಮೆ; ಭಾರತದಲ್ಲಿ ಎಷ್ಟಿದೆ ಚಿನ್ನದ ದರ? ನೋಡಿ ಡಿಟೇಲ್ಸ್
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 30, 2023 | 5:00 AM

Share

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ಏರಿಳಿಕೆಯ ಆಟಕ್ಕೆ ತಾತ್ಕಾಲಿಕ ವಿರಾಮ ಬಿದ್ದಿದೆ. ಸಿಂಗಾಪುರದಲ್ಲಿ ಚಿನ್ನದ ಬೆಲೆ ತುಸು ಇಳಿದಿದೆ. 22 ಗ್ರಾಮ್ ಚಿನ್ನದ ಬೆಲೆ ಅಲ್ಲಿ 818 ಸಿಂಗಾಪುರಿಯನ್ ಡಾಲರ್​ಗೆ ಇಳಿದಿದೆ. ಭಾರತೀಯ ರುಪಾಯಿ ಲೆಕ್ಕದಲ್ಲಿ 50,000 ರೂಗಿಂತ ತುಸು ಕಡಿಮೆ ಆಗಿದೆ. ಅಮೆರಿಕ, ದುಬೈ ಬಳಿಕ ಸಿಂಗಾಪುರದಲ್ಲಿ ಮಾತ್ರ ಇಷ್ಟು ಕಡಿಮೆ ಬೆಲೆ ಇರುವುದು. ಸಿಂಗಾಪುರ ಹೊರತುಪಡಿಸಿ ಬಹುತೇಕ ಉಳಿದ ಕಡೆ ಚಿನ್ನ ಮತ್ತು ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,700 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿAyyo Oyo: ಸಿನಿಮಾ ಕತೆಯಲ್ಲ..! ಕ್ಲೀನಿಂಗ್ ಕೆಲಸ ಮಾಡುವ ನೌಕರನೆಂದು ಭಾವಿಸಿ ಓಯೋ ಸಿಇಒಗೆ ಆವಾಜ್ ಹಾಕಿದ್ದ ಗ್ರಾಹಕ; ಆದರೂ ಗುರುತು ಬಿಟ್ಟುಕೊಡಲಿಲ್ಲ ರಿತೇಶ್

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 30ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,600 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,600 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 770 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,600 ರೂ
  • ಚೆನ್ನೈ: 55,940 ರೂ
  • ಮುಂಬೈ: 55,550 ರೂ
  • ದೆಹಲಿ: 55,700 ರೂ
  • ಕೋಲ್ಕತಾ: 55,550 ರೂ
  • ಕೇರಳ: 55,550 ರೂ
  • ಅಹ್ಮದಾಬಾದ್: 55,600 ರೂ
  • ಜೈಪುರ್: 55,700 ರೂ
  • ಲಕ್ನೋ: 55,700 ರೂ
  • ಭುವನೇಶ್ವರ್: 55,550 ರೂ

ಇದನ್ನೂ ಓದಿTour Package: ಐಆರ್​ಸಿಟಿಸಿಯಿಂದ ಕಡಿಮೆ ಬೆಲೆಗೆ ಊಟಿ ಮುದುಮಲೈ ಪ್ರವಾಸ ಪ್ಯಾಕೇಜ್; ಲಾಡ್ಜ್, ಕಾರ್ ಉಚಿತ; ನೋಡಿ ಡೀಟೇಲ್ಸ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,850 ರಿಂಗಿಟ್ (51,183 ರುಪಾಯಿ)
  • ದುಬೈ: 2182.50 ಡಿರಾಮ್ (49,089 ರುಪಾಯಿ)
  • ಅಮೆರಿಕ: 595 ಡಾಲರ್ (49,146 ರುಪಾಯಿ)
  • ಸಿಂಗಾಪುರ: 818 ಸಿಂಗಾಪುರ್ ಡಾಲರ್ (49,928 ರುಪಾಯಿ)
  • ಕತಾರ್: 2,250 ಕತಾರಿ ರಿಯಾಲ್ (51,049 ರೂ)
  • ಓಮನ್: 238 ಒಮಾನಿ ರಿಯಾಲ್ (51,049 ರುಪಾಯಿ)
  • ಕುವೇತ್: 187 ಕುವೇತಿ ದಿನಾರ್ (50,212 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,700 ರೂ
  • ಚೆನ್ನೈ: 7,700 ರೂ
  • ಮುಂಬೈ: 7,300 ರೂ
  • ದೆಹಲಿ: 7,300 ರೂ
  • ಕೋಲ್ಕತಾ: 7,300 ರೂ
  • ಕೇರಳ: 7,700 ರೂ
  • ಅಹ್ಮದಾಬಾದ್: 7,300 ರೂ
  • ಜೈಪುರ್: 7,300 ರೂ
  • ಲಕ್ನೋ: 7,300 ರೂ
  • ಭುವನೇಶ್ವರ್: 7,700 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ