AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 30th May: ಚಿನ್ನ, ಬೆಳ್ಳಿ ಬೆಲೆ ಗುರುವಾರ ಮತ್ತೆ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2024 May 30th: ಅಮೂಲ್ಯ ಲೋಹಗಳಿಗೆ ಜಾಗತಿಕವಾಗಿ ಬೇಡಿಕೆ ಸತತವಾಗಿ ಹೆಚ್ಚುತ್ತಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,200 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 97.70 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 67,100 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,525 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 30th May: ಚಿನ್ನ, ಬೆಳ್ಳಿ ಬೆಲೆ ಗುರುವಾರ ಮತ್ತೆ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 30, 2024 | 5:00 AM

Share

ಬೆಂಗಳೂರು, ಮೇ 30: ಜಾಗತಿಕವಾಗಿ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and silver Rates) ಓಟ ನಿಲ್ಲುತ್ತಿಲ್ಲ. ಸತತ ಮೂರು ಬಾರಿ ಬೆಲೆ ಏರಿಕೆ ಆಗಿದೆ. ಕಳೆದ ವಾರ ಒಂದಷ್ಟು ಇಳಿಕೆಯಿಂದ ನಿರಾಳರಾಗಿದ್ದ ಆಭರಣ ಪ್ರೇಮಿಗಳಿಗೆ ಈಗ ಚಿನ್ನದ ಬೆಲೆ ಸತತ ಏರಿಕೆ ಆಗುತ್ತಿರುವುದು ಡವಡವ ಮೂಡಿಸಿದೆ. ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್​ಗೆ 25 ರೂನಷ್ಟು ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,770 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,525 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 30ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,200 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 977 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,200 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 952.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 67,100 ರೂ
  • ಚೆನ್ನೈ: 67,750 ರೂ
  • ಮುಂಬೈ: 67,100 ರೂ
  • ದೆಹಲಿ: 67,250 ರೂ
  • ಕೋಲ್ಕತಾ: 67,100 ರೂ
  • ಕೇರಳ: 67,100 ರೂ
  • ಅಹ್ಮದಾಬಾದ್: 67,150 ರೂ
  • ಜೈಪುರ್: 67,250 ರೂ
  • ಲಕ್ನೋ: 67,250 ರೂ
  • ಭುವನೇಶ್ವರ್: 67,100 ರೂ

ಇದನ್ನೂ ಓದಿ: Post Office Accident Insurance: 520 ರೂಗೆ 10 ಲಕ್ಷ ರೂ; 12 ರೂಗೆ 2 ಲಕ್ಷ ರೂ ಆಕ್ಸಿಡೆಂಟ್ ಕವರೇಜ್ ಕೊಡುವ ಅಂಚೆ ಕಚೇರಿ ಸ್ಕೀಮ್​ಗಳು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,500 ರಿಂಗಿಟ್ (62,040 ರುಪಾಯಿ)
  • ದುಬೈ: 2,625 ಡಿರಾಮ್ (59,580 ರುಪಾಯಿ)
  • ಅಮೆರಿಕ: 720 ಡಾಲರ್ (60,030 ರುಪಾಯಿ)
  • ಸಿಂಗಾಪುರ: 988 ಸಿಂಗಾಪುರ್ ಡಾಲರ್ (61,010 ರುಪಾಯಿ)
  • ಕತಾರ್: 2,685 ಕತಾರಿ ರಿಯಾಲ್ (61,400 ರೂ)
  • ಸೌದಿ ಅರೇಬಿಯಾ: 2,700 ಸೌದಿ ರಿಯಾಲ್ (60,010 ರುಪಾಯಿ)
  • ಓಮನ್: 285 ಒಮಾನಿ ರಿಯಾಲ್ (61,720 ರುಪಾಯಿ)
  • ಕುವೇತ್: 224 ಕುವೇತಿ ದಿನಾರ್ (60,860 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,525 ರೂ
  • ಚೆನ್ನೈ: 10,220 ರೂ
  • ಮುಂಬೈ: 9,770 ರೂ
  • ದೆಹಲಿ: 9,770 ರೂ
  • ಕೋಲ್ಕತಾ: 9,770 ರೂ
  • ಕೇರಳ: 10,220 ರೂ
  • ಅಹ್ಮದಾಬಾದ್: 9,770 ರೂ
  • ಜೈಪುರ್: 9,770 ರೂ
  • ಲಕ್ನೋ: 9,770 ರೂ
  • ಭುವನೇಶ್ವರ್: 10,220 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ