Gold Silver Price on 31 May: ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತೆ ಇಳಿಕೆ; ದೇಶ ವಿದೇಶಗಳಲ್ಲಿ ಇವತ್ತಿನ ದರಗಳೆಷ್ಟು ಇದೆ, ವಿವರ ನೋಡಿ

Bullion Market 2023, May 31st: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,490 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 72.60 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 31 May: ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತೆ ಇಳಿಕೆ; ದೇಶ ವಿದೇಶಗಳಲ್ಲಿ ಇವತ್ತಿನ ದರಗಳೆಷ್ಟು ಇದೆ, ವಿವರ ನೋಡಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 31, 2023 | 5:00 AM

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ಈ ವಾರವೂ ಮುಂದುವರಿಯುವಂತೆ ತೋರುತ್ತಿದೆ. ಎರಡೂ ಲೋಹಗಳ ಬೆಲೆ ಇಳಿಮುಖದಲ್ಲಿದೆ. ವಿದೇಶಗಳ ಚಿನಿವಾರ ಪೇಟೆಗಳ ಪೈಕಿ ಕತಾರ್, ಓಮನ್ ಹೊರತುಡಿಸಿ ಉಳಿದ ಕಡೆ ಬಹುತೇಕ ಯಥಾಸ್ಥಿತಿಯಲ್ಲಿ ಬೆಲೆಗಳಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,490 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,260 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,650 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿDA Hike: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 4ರಷ್ಟು ಹೆಚ್ಚಳ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 31ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,490 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 726 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,530 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,500 ರೂ
  • ಚೆನ್ನೈ: 55,850 ರೂ
  • ಮುಂಬೈ: 55,450 ರೂ
  • ದೆಹಲಿ: 55,600 ರೂ
  • ಕೋಲ್ಕತಾ: 55,450 ರೂ
  • ಕೇರಳ: 55,450 ರೂ
  • ಅಹ್ಮದಾಬಾದ್: 55,500 ರೂ
  • ಜೈಪುರ್: 55,600 ರೂ
  • ಲಕ್ನೋ: 55,600 ರೂ
  • ಭುವನೇಶ್ವರ್: 55,450 ರೂ

ಇದನ್ನೂ ಓದಿCSK Shares: ಧೋನಿ ಬ್ರ್ಯಾಂಡ್ ಶಕ್ತಿ; ಅನ್​ಲಿಸ್ಟೆಡ್ ಮಾರುಕಟ್ಟೆಯಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ಸ್; ಷೇರುಬೆಲೆ ಭರ್ಜರಿ ಏರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,850 ರಿಂಗಿಟ್ (51,183 ರುಪಾಯಿ)
  • ದುಬೈ: 2182.50 ಡಿರಾಮ್ (49,089 ರುಪಾಯಿ)
  • ಅಮೆರಿಕ: 595 ಡಾಲರ್ (49,146 ರುಪಾಯಿ)
  • ಸಿಂಗಾಪುರ: 818 ಸಿಂಗಾಪುರ್ ಡಾಲರ್ (49,928 ರುಪಾಯಿ)
  • ಕತಾರ್: 2,260 ಕತಾರಿ ರಿಯಾಲ್ (51,318 ರೂ)
  • ಓಮನ್: 240 ಒಮಾನಿ ರಿಯಾಲ್ (51,574 ರುಪಾಯಿ)
  • ಕುವೇತ್: 187 ಕುವೇತಿ ದಿನಾರ್ (50,212 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,650 ರೂ
  • ಚೆನ್ನೈ: 7,650 ರೂ
  • ಮುಂಬೈ: 7,260 ರೂ
  • ದೆಹಲಿ: 7,260 ರೂ
  • ಕೋಲ್ಕತಾ: 7,260 ರೂ
  • ಕೇರಳ: 7,650 ರೂ
  • ಅಹ್ಮದಾಬಾದ್: 7,260 ರೂ
  • ಜೈಪುರ್: 7,260 ರೂ
  • ಲಕ್ನೋ: 7,260 ರೂ
  • ಭುವನೇಶ್ವರ್: 7,650 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?
Video: ಆಟೋ ಚಾಲಕನನ್ನು ಥಳಿಸಿದ ಮಹಿಳೆ
Video: ಆಟೋ ಚಾಲಕನನ್ನು ಥಳಿಸಿದ ಮಹಿಳೆ