ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ಈ ವಾರವೂ ಮುಂದುವರಿಯುವಂತೆ ತೋರುತ್ತಿದೆ. ಎರಡೂ ಲೋಹಗಳ ಬೆಲೆ ಇಳಿಮುಖದಲ್ಲಿದೆ. ವಿದೇಶಗಳ ಚಿನಿವಾರ ಪೇಟೆಗಳ ಪೈಕಿ ಕತಾರ್, ಓಮನ್ ಹೊರತುಡಿಸಿ ಉಳಿದ ಕಡೆ ಬಹುತೇಕ ಯಥಾಸ್ಥಿತಿಯಲ್ಲಿ ಬೆಲೆಗಳಿವೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,450 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,490 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,260 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,650 ರುಪಾಯಿಯಲ್ಲಿ ಇದೆ.
ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.
ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
ಇದನ್ನೂ ಓದಿ: DA Hike: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 4ರಷ್ಟು ಹೆಚ್ಚಳ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)