Gold Silver Price on 31st May: ಸತತ ಏರಿಕೆ ಬಳಿಕ ಕಡಿಮೆಗೊಂಡ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 May 31st: ಸತತ ಏರಿಕೆ ಬಳಿಕ ಚಿನ್ನ, ಬೆಳ್ಳಿ ಬೆಲೆ ಶುಕ್ರವಾರ ತಗ್ಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,760 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 96.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,700 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,550 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 31st May: ಸತತ ಏರಿಕೆ ಬಳಿಕ ಕಡಿಮೆಗೊಂಡ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: May 31, 2024 | 5:00 AM

ಬೆಂಗಳೂರು, ಮೇ 31: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಈ ವಾರ ಮೊದಲ ಬಾರಿಗೆ ಪ್ರಮುಖ ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 40 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ ಎರಡೂವರೆ ರೂ ಅಗ್ಗವಾಗಿದೆ. ಸತತ ಹೆಚ್ಚಳದ ಬಳಿಕ ಆಭರಣ ಪ್ರಿಯರು ಒಂದಿಷ್ಟು ನಿಟ್ಟುಸಿರು ಬಿಡಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,760 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,550 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 31ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,760 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,760 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 955 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,700 ರೂ
  • ಚೆನ್ನೈ: 67,300 ರೂ
  • ಮುಂಬೈ: 66,700 ರೂ
  • ದೆಹಲಿ: 66,850 ರೂ
  • ಕೋಲ್ಕತಾ: 66,700 ರೂ
  • ಕೇರಳ: 66,700 ರೂ
  • ಅಹ್ಮದಾಬಾದ್: 66,750 ರೂ
  • ಜೈಪುರ್: 66,850 ರೂ
  • ಲಕ್ನೋ: 66,850 ರೂ
  • ಭುವನೇಶ್ವರ್: 66,700 ರೂ

ಇದನ್ನೂ ಓದಿ: ಬ್ಯಾಂಕುಗಳಲ್ಲಿ ಅನ್​ಕ್ಲೇಮ್ಡ್ ಡೆಪಾಸಿಟ್ ಪ್ರಮಾಣ ಮಾರ್ಚ್ ಅಂತ್ಯಕ್ಕೆ 78,213 ಕೋಟಿ ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,490 ರಿಂಗಿಟ್ (61,760 ರುಪಾಯಿ)
  • ದುಬೈ: 2,620 ಡಿರಾಮ್ (59,400 ರುಪಾಯಿ)
  • ಅಮೆರಿಕ: 715 ಡಾಲರ್ (59,550 ರುಪಾಯಿ)
  • ಸಿಂಗಾಪುರ: 985 ಸಿಂಗಾಪುರ್ ಡಾಲರ್ (60,750 ರುಪಾಯಿ)
  • ಕತಾರ್: 2,655 ಕತಾರಿ ರಿಯಾಲ್ (60,660 ರೂ)
  • ಸೌದಿ ಅರೇಬಿಯಾ: 2,680 ಸೌದಿ ರಿಯಾಲ್ (59,500 ರುಪಾಯಿ)
  • ಓಮನ್: 283 ಒಮಾನಿ ರಿಯಾಲ್ (61,210 ರುಪಾಯಿ)
  • ಕುವೇತ್: 221.50 ಕುವೇತಿ ದಿನಾರ್ (60,120 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,550 ರೂ
  • ಚೆನ್ನೈ: 10,100 ರೂ
  • ಮುಂಬೈ: 9,650 ರೂ
  • ದೆಹಲಿ: 9,650 ರೂ
  • ಕೋಲ್ಕತಾ: 9,650 ರೂ
  • ಕೇರಳ: 10,100 ರೂ
  • ಅಹ್ಮದಾಬಾದ್: 9,650 ರೂ
  • ಜೈಪುರ್: 9,650 ರೂ
  • ಲಕ್ನೋ: 9,650 ರೂ
  • ಭುವನೇಶ್ವರ್: 10,100 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us