AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates: ಬೆಳ್ಳಿ ಬೆಲೆ ಏರಿಕೆ; ಕೆಲ ವಿದೇಶಗಳಲ್ಲಿ ಕುಸಿದ ಚಿನ್ನ; ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳು ಇಂದು ಎಷ್ಟಿವೆ?

Bullion Market 2023, May 3rd: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,700 ರುಪಾಯಿಯಲ್ಲಿ ಮುಂದುವರಿದಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,760 ರುಪಾಯಿಯಲ್ಲಿದೆ. ಬೆಳ್ಳಿ ಬೆಲೆ ಭಾರತದಲ್ಲಿ ಗ್ರಾಮ್​ಗೆ 10 ಪೈಸೆ ಏರಿಕೆ ಆಗಿದೆ. ಸದ್ಯ 76.10 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Rates: ಬೆಳ್ಳಿ ಬೆಲೆ ಏರಿಕೆ; ಕೆಲ ವಿದೇಶಗಳಲ್ಲಿ ಕುಸಿದ ಚಿನ್ನ; ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳು ಇಂದು ಎಷ್ಟಿವೆ?
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 03, 2023 | 5:01 AM

Share

ಮುಖ್ಯಾಂಶಗಳು

  • ಭಾರತದಲ್ಲಿ ಮೆ 2ರಂದು 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ 55,700 ರುಪಾಯಿ. 100 ಗ್ರಾಮ್ ಬೆಳ್ಳಿ ಬೆಲೆ 7,610 ರೂ ಇದೆ.
  • ಅಮೆರಿಕ ಮತ್ತು ದುಬೈನಲ್ಲಿ ಚಿನ್ನದ ಬೆಲೆ 50,000 ರೂಗಿಂತ ಕಡಿಮೆ ಇದೆ. ಅನಿವಾಸಿ ಭಾರತೀಯರು ಹೆಚ್ಚಾಗಿರುವ ಇತರ ಕಡೆಯಲ್ಲೂ ಚಿನ್ನದ ಬೆಲೆ ಏರಿಕೆ ಆಗಿಲ್ಲ.
  • ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 55,750 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,050 ರೂ ಇದೆ.

ಬೆಂಗಳೂರು: ಹಲವು ದಿನಗಳಿಂದ ಏರುವುದನ್ನು ನಿಲ್ಲಿಸಿರುವ ಚಿನ್ನದ ಬೆಲೆ ಸದ್ಯ ಯಥಾಸ್ಥಿತಿಯಲ್ಲಿದೆ. ಆದರೆ, ಬೆಳ್ಳಿ ತುಸುವೇ ಬೆಲೆ ಏರಿಕೆ ಕಂಡಿದೆ. ಗ್ರಾಮ್​ಗೆ 10ಪೈಸೆಯಷ್ಟು ಬೆಳ್ಳಿ ಬೆಲೆ ಏರಿದೆ. ಅಕ್ಷಯ ತೃತೀಯ ದಿನದಿಂದಲೂ ಚಿನ್ನದ ಬೆಲೆ ಬಹುತೇಕ ಇಳಿಕೆಯ ಹಾದಿಯಲ್ಲಿದೆ. ಭಾರತ ಹಾಗೂ ವಿದೇಶಗಳ ಚಿನಿವಾರ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಅಷ್ಟೊಂದು ಏರಿಳಿತಗಳಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,760 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,610 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,050 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿMudra Loan: ಪಿಎಂ ಮುದ್ರಾ ಸ್ಕೀಮ್; 10 ಲಕ್ಷ ರೂವರೆಗೂ ಸಾಲ; ಎಲ್ಲಿ ಸಿಗುತ್ತೆ? ಯಾರಿಗೆ ಸಿಗುತ್ತೆ ಮುದ್ರಾ ಲೋನ್?

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 3ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,760 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 761 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,810 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 805 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,750 ರೂ
  • ಚೆನ್ನೈ: 56,300 ರೂ
  • ಮುಂಬೈ: 55,700 ರೂ
  • ದೆಹಲಿ: 55,850 ರೂ
  • ಕೋಲ್ಕತಾ: 55,700 ರೂ
  • ಕೇರಳ: 55,700 ರೂ
  • ಅಹ್ಮದಾಬಾದ್: 55,750 ರೂ
  • ಜೈಪುರ್: 56,850 ರೂ
  • ಲಕ್ನೋ: 56,850 ರೂ
  • ಭುವನೇಶ್ವರ್: 55,700 ರೂ

ಇದನ್ನೂ ಓದಿSuccess Story ಕರ್ನಾಟಕದಲ್ಲಿ ಹಣ್ಣು ವ್ಯಾಪಾರ ಮಾಡುತ್ತಿದ್ದ ಆರ್​ಎಸ್ ಕಾಮತ್ ರಾಷ್ಟ್ರಮಟ್ಟದಲ್ಲಿ ದೊಡ್ಡ ಬ್ರ್ಯಾಂಡ್ ಕಟ್ಟಿದ ಕಥೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,840 ರಿಂಗಿಟ್ (52,127 ರುಪಾಯಿ)
  • ದುಬೈ: 2222.50 ಡಿರಾಮ್ (49,483 ರುಪಾಯಿ)
  • ಅಮೆರಿಕ: 610 ಡಾಲರ್ (49,936 ರುಪಾಯಿ)
  • ಸಿಂಗಾಪುರ: 824 ಸಿಂಗಾಪುರ್ ಡಾಲರ್ (50,490 ರುಪಾಯಿ)
  • ಕತಾರ್: 2,290 ಕತಾರಿ ರಿಯಾಲ್ (51,484 ರೂ)
  • ಓಮನ್: 242 ಒಮಾನಿ ರಿಯಾಲ್ (51,458 ರುಪಾಯಿ)
  • ಕುವೇತ್: 190 ಕುವೇತಿ ದಿನಾರ್ (50,725 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,050 ರೂ
  • ಚೆನ್ನೈ: 8,050 ರೂ
  • ಮುಂಬೈ: 7,610 ರೂ
  • ದೆಹಲಿ: 7,610 ರೂ
  • ಕೋಲ್ಕತಾ: 7,610 ರೂ
  • ಕೇರಳ: 8,050 ರೂ
  • ಅಹ್ಮದಾಬಾದ್: 7,610 ರೂ
  • ಜೈಪುರ್: 7,610 ರೂ
  • ಲಕ್ನೋ: 7,610 ರೂ
  • ಭುವನೇಶ್ವರ್: 8,050 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​