Gold Rates: ಒಮ್ಮೆಲೇ ದುಬಾರಿಯಾದ ಚಿನ್ನ; ಸತತ ಬೆಲೆ ಇಳಿಕೆ ಕಂಡು ಖುಷಿಯಾಗಿದ್ದವರ ಮೊಗದಲ್ಲಿ ಮಂದಹಾಸ ಮಾಯ

Bullion Market 2023, May 4th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,500 ರುಪಾಯಿಗೆ ಏರಿದೆ. 10 ಗ್ರಾಮ್​ಗೆ 800 ರೂನಷ್ಟು ಚಿನ್ನ ದುಬಾರಿಯಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,640 ರುಪಾಯಿಯಲ್ಲಿದೆ. ಬೆಳ್ಳಿ ಬೆಲೆ ಭಾರತದಲ್ಲಿ ಏರಿಕೆ ಆಗಿದೆ. ಸದ್ಯ 76.80 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Rates: ಒಮ್ಮೆಲೇ ದುಬಾರಿಯಾದ ಚಿನ್ನ; ಸತತ ಬೆಲೆ ಇಳಿಕೆ ಕಂಡು ಖುಷಿಯಾಗಿದ್ದವರ ಮೊಗದಲ್ಲಿ ಮಂದಹಾಸ ಮಾಯ
ಚಿನ್ನ

Updated on: May 04, 2023 | 5:00 AM

ಬೆಂಗಳೂರು: ಹಲವು ದಿನಗಳಿಂದ ಏರುವುದನ್ನು ನಿಲ್ಲಿಸಿರುವ ಚಿನ್ನದ ಬೆಲೆ ಮತ್ತೆ ಏರುಗತಿಗೆ ಬಂದಿದೆ. ಬೆಳ್ಳಿ ಬೆಲೆ ಸತತ 3ನೇ ದಿನವೂ ಏರಿದೆ. ಅಕ್ಷಯ ತೃತೀಯ ದಿನದಿಂದಲೂ ಚಿನ್ನದ ಬೆಲೆ ಬಹುತೇಕ ಇಳಿಕೆಯ ಹಾದಿಯಲ್ಲಿತ್ತು. ಈಗ ಒಮ್ಮೆಗೇ ಗ್ರಾಮ್​ಗೆ 80 ರೂನಂತೆ ಚಿನ್ನದ ದರ ಏರಿಕೆ ಅಗಿದೆ. ಭಾರತ ಹಾಗು ವಿದೇಶಗಳ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿಗೆ ಭರ್ಜರಿ ಬೇಡಿಕೆ ಸೃಷ್ಟಿಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,680 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,180 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿHindenburg Research: ಅದಾನಿ ಆಯ್ತು, ಹಿಂಡನ್ಬರ್ಗ್​ಗೆ ಈಗ ಟಾರ್ಗೆಟ್ ಆದ್ರು ಟ್ರಂಪ್ ಬೆಂಬಲಿಗ ಉದ್ಯಮಿ ಕಾರ್ಲ್ ಐಕಾನ್

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 4ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,640 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 768 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,690 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 818 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,550 ರೂ
  • ಚೆನ್ನೈ: 57,060 ರೂ
  • ಮುಂಬೈ: 56,500 ರೂ
  • ದೆಹಲಿ: 56,650 ರೂ
  • ಕೋಲ್ಕತಾ: 56,500 ರೂ
  • ಕೇರಳ: 56,500 ರೂ
  • ಅಹ್ಮದಾಬಾದ್: 56,550 ರೂ
  • ಜೈಪುರ್: 56,650 ರೂ
  • ಲಕ್ನೋ: 56,650 ರೂ
  • ಭುವನೇಶ್ವರ್: 56,500 ರೂ

ಇದನ್ನೂ ಓದಿGreat Returns: 10,000 ರೂ ಎಸ್​ಐಪಿ 23 ವರ್ಷದಲ್ಲಿ 1.14 ಕೋಟಿ ರೂ; ಗಮನ ಸೆಳೆದ ಹೈಬ್ರಿಡ್ ಮ್ಯೂಚುವಲ್ ಫಂಡ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,860 ರಿಂಗಿಟ್ (52,560 ರುಪಾಯಿ)
  • ದುಬೈ: 2260 ಡಿರಾಮ್ (50,340 ರುಪಾಯಿ)
  • ಅಮೆರಿಕ: 615 ಡಾಲರ್ (50,313 ರುಪಾಯಿ)
  • ಸಿಂಗಾಪುರ: 837 ಸಿಂಗಾಪುರ್ ಡಾಲರ್ (51,385 ರುಪಾಯಿ)
  • ಕತಾರ್: 2,320 ಕತಾರಿ ರಿಯಾಲ್ (52,120 ರೂ)
  • ಓಮನ್: 246 ಒಮಾನಿ ರಿಯಾಲ್ (52,270 ರುಪಾಯಿ)
  • ಕುವೇತ್: 191.50 ಕುವೇತಿ ದಿನಾರ್ (51,139 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,180 ರೂ
  • ಚೆನ್ನೈ: 8,180 ರೂ
  • ಮುಂಬೈ: 7,680 ರೂ
  • ದೆಹಲಿ: 7,680 ರೂ
  • ಕೋಲ್ಕತಾ: 7,680 ರೂ
  • ಕೇರಳ: 8,180 ರೂ
  • ಅಹ್ಮದಾಬಾದ್: 7,680 ರೂ
  • ಜೈಪುರ್: 7,680 ರೂ
  • ಲಕ್ನೋ: 7,680 ರೂ
  • ಭುವನೇಶ್ವರ್: 8,180 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us