Gold Rates: ಚಿನ್ನ, ಬೆಳ್ಳಿಗೆ ಬೇಡಿಕೆ ತಗ್ಗುತ್ತಿಲ್ಲ, ಬೆಲೆ ಏರಿಕೆ ನಿಲ್ಲುತ್ತಿಲ್ಲ; ಭಾರತ ಹಾಊ ವಿದೇಶಗಳಲ್ಲಿ ಎಷ್ಟಿದೆ ದರ, ಇಲ್ಲಿ ನೋಡಿ

Bullion Market 2023, May 6th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,200 ರುಪಾಯಿ ಗಟಿ ದಾಟಿದೆ. ಕಳೆದ 3 ದಿನದಲ್ಲಿ ಚಿನ್ನದ ಬೆಲೆ 1,500 ರೂನಷ್ಟು ಏರಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,400 ರುಪಾಯಿಗೆ ಏರಿದೆ. ಬೆಳ್ಳಿ ಬೆಲೆಯೂ ಸದ್ಯ ಗ್ರಾಮ್​ಗೆ 78.25 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Rates: ಚಿನ್ನ, ಬೆಳ್ಳಿಗೆ ಬೇಡಿಕೆ ತಗ್ಗುತ್ತಿಲ್ಲ, ಬೆಲೆ ಏರಿಕೆ ನಿಲ್ಲುತ್ತಿಲ್ಲ; ಭಾರತ ಹಾಊ ವಿದೇಶಗಳಲ್ಲಿ ಎಷ್ಟಿದೆ ದರ, ಇಲ್ಲಿ ನೋಡಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 06, 2023 | 5:00 AM

ಬೆಂಗಳೂರು: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯ ಸತತ ಏರಿಕೆ ಮುಂದುವರಿಯುತ್ತಿದೆ. ಇದೀಗ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 200 ರೂನಷ್ಟು ಏರಿದೆ. ಇದರೊಂದಿಗೆ 3 ದಿನದಲ್ಲಿ ಒಂದೂವರೆ ಸಾವಿರ ರೂನಷ್ಟು ಬೆಲೆ ಹೆಚ್ಚಳ ಕಂಡಿದೆ ಚಿನ್ನ. ಭಾರತದಲ್ಲಿ ಮಾತ್ರವಲ್ಲ ಬಹುತೇಕ ಎಲ್ಲಾ ದೇಶಗಳಲ್ಲೂ ಚಿನ್ನದ ಬೆಲೆ ಹೆಚ್ಚುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,825 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,370 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿRs 1 Crore: ಎಸ್​ಐಪಿ ಸ್ಕೀಮ್​ನಲ್ಲಿ 1 ಕೋಟಿ ಗಳಿಸಲು ಎಷ್ಟು ವರ್ಷ ಬೇಕು, ಎಷ್ಟು ಹೂಡಿಕೆ ಬೇಕು? ಇಲ್ಲಿದೆ ಪಟ್ಟಿ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 6ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,400 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 782.50 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 837 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,250 ರೂ
  • ಚೆನ್ನೈ: 57,750 ರೂ
  • ಮುಂಬೈ: 57,200 ರೂ
  • ದೆಹಲಿ: 57,350 ರೂ
  • ಕೋಲ್ಕತಾ: 57,200 ರೂ
  • ಕೇರಳ: 57,200 ರೂ
  • ಅಹ್ಮದಾಬಾದ್: 57,250 ರೂ
  • ಜೈಪುರ್: 57,350 ರೂ
  • ಲಕ್ನೋ: 57,350 ರೂ
  • ಭುವನೇಶ್ವರ್: 57,200 ರೂ

ಇದನ್ನೂ ಓದಿ7th Pay Commission: ಸರ್ಕಾರಿ ನೌಕರರಿಗೆ ಸಿಹಿಕಹಿ ಸುದ್ದಿ; ಈ ಬಾರಿ ಡಿಎ ಹೆಚ್ಚಳ ನಿರೀಕ್ಷೆಗಿಂತ ಕಡಿಮೆಯಾ? ಎಷ್ಟಿರಲಿದೆ ತುಟ್ಟಿಭತ್ಯೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,900 ರಿಂಗಿಟ್ (53,409 ರುಪಾಯಿ)
  • ದುಬೈ: 2287.5 ಡಿರಾಮ್ (50,902 ರುಪಾಯಿ)
  • ಅಮೆರಿಕ: 630 ಡಾಲರ್ (51,479 ರುಪಾಯಿ)
  • ಸಿಂಗಾಪುರ: 845 ಸಿಂಗಾಪುರ್ ಡಾಲರ್ (52,127 ರುಪಾಯಿ)
  • ಕತಾರ್: 2,370 ಕತಾರಿ ರಿಯಾಲ್ (53,198 ರೂ)
  • ಓಮನ್: 250 ಒಮಾನಿ ರಿಯಾಲ್ (53,065 ರುಪಾಯಿ)
  • ಕುವೇತ್: 195.50 ಕುವೇತಿ ದಿನಾರ್ (52,164 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,370 ರೂ
  • ಚೆನ್ನೈ: 8,370 ರೂ
  • ಮುಂಬೈ: 7,825 ರೂ
  • ದೆಹಲಿ: 7,825 ರೂ
  • ಕೋಲ್ಕತಾ: 7,825 ರೂ
  • ಕೇರಳ: 8,370 ರೂ
  • ಅಹ್ಮದಾಬಾದ್: 7,825 ರೂ
  • ಜೈಪುರ್: 7,825 ರೂ
  • ಲಕ್ನೋ: 7,825 ರೂ
  • ಭುವನೇಶ್ವರ್: 8,370 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ