ಬೆಂಗಳೂರು: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯ ಸತತ ಏರಿಕೆ ಮುಂದುವರಿಯುತ್ತಿದೆ. ಇದೀಗ 22 ಕ್ಯಾರೆಟ್ನ 10 ಗ್ರಾಮ್ ಚಿನ್ನದ ಬೆಲೆ 200 ರೂನಷ್ಟು ಏರಿದೆ. ಇದರೊಂದಿಗೆ 3 ದಿನದಲ್ಲಿ ಒಂದೂವರೆ ಸಾವಿರ ರೂನಷ್ಟು ಬೆಲೆ ಹೆಚ್ಚಳ ಕಂಡಿದೆ ಚಿನ್ನ. ಭಾರತದಲ್ಲಿ ಮಾತ್ರವಲ್ಲ ಬಹುತೇಕ ಎಲ್ಲಾ ದೇಶಗಳಲ್ಲೂ ಚಿನ್ನದ ಬೆಲೆ ಹೆಚ್ಚುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,825 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,370 ರುಪಾಯಿಯಲ್ಲಿ ಇದೆ.
ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.
ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
ಇದನ್ನೂ ಓದಿ: Rs 1 Crore: ಎಸ್ಐಪಿ ಸ್ಕೀಮ್ನಲ್ಲಿ 1 ಕೋಟಿ ಗಳಿಸಲು ಎಷ್ಟು ವರ್ಷ ಬೇಕು, ಎಷ್ಟು ಹೂಡಿಕೆ ಬೇಕು? ಇಲ್ಲಿದೆ ಪಟ್ಟಿ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)