AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 6th May: ಚಿನ್ನದ ಬೆಲೆ ಹೆಚ್ಚಳ, ಬೆಳ್ಳಿಯಲ್ಲಿ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 May 6th: ಕಳೆದ ಎರಡು ವಾರಗಳಿಂದ ಚಿನ್ನ, ಬೆಳ್ಳಿ ಬೆಲೆ ಏರಿಳಿತ ಬಹಳವೇ ಆಗುತ್ತಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,830 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 83 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 65,850 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,260 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 6th May: ಚಿನ್ನದ ಬೆಲೆ ಹೆಚ್ಚಳ, ಬೆಳ್ಳಿಯಲ್ಲಿ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on:May 06, 2024 | 10:07 AM

Share

ಬೆಂಗಳೂರು, ಮೇ 6: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಳೆದ ಎರಡು ವಾರಗಳಿಂದ ಹೊಯ್ದಾಡಿದರೂ ಸಮತೋಲನದಿಂದ ಕೂಡಿವೆ. ಚಿನ್ನದ ಬೆಲೆ ಸೋಮವಾರ (Gold and silver Rates) ಏರಿಕೆ ಕಂಡರೆ, ಬೆಳ್ಳಿ ಬೆಲೆಯಲ್ಲಿ ಇಳಿಕೆ ಆಗಿದೆ. ಕಳೆದ ಎರಡು ವಾರದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 70 ರೂನಷ್ಟು ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,830 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 65,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,260 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 6ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,830 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 830 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,830 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 826 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 65,850 ರೂ
  • ಚೆನ್ನೈ: 66,000 ರೂ
  • ಮುಂಬೈ: 65,850 ರೂ
  • ದೆಹಲಿ: 66,000 ರೂ
  • ಕೋಲ್ಕತಾ: 65,850 ರೂ
  • ಕೇರಳ: 65,850 ರೂ
  • ಅಹ್ಮದಾಬಾದ್: 65,900 ರೂ
  • ಜೈಪುರ್: 66,000 ರೂ
  • ಲಕ್ನೋ: 66,000 ರೂ
  • ಭುವನೇಶ್ವರ್: 65,850 ರೂ

ಇದನ್ನೂ ಓದಿ: ದೇಶ ಬಿಟ್ಟು ಹೋಗುತ್ತೇವೆ ಹೊರತು ಗೌಪ್ಯತೆ ಮಾತ್ರ ಬಿಡಲ್ಲ: ವಾಟ್ಸಾಪ್ ಹಠಕ್ಕೇನು ಕಾರಣ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,310 ರಿಂಗಿಟ್ (58,205 ರುಪಾಯಿ)
  • ದುಬೈ: 2,580 ಡಿರಾಮ್ (58,574 ರುಪಾಯಿ)
  • ಅಮೆರಿಕ: 705 ಡಾಲರ್ (58,788 ರುಪಾಯಿ)
  • ಸಿಂಗಾಪುರ: 966 ಸಿಂಗಾಪುರ್ ಡಾಲರ್ (59,690 ರುಪಾಯಿ)
  • ಕತಾರ್: 2,630 ಕತಾರಿ ರಿಯಾಲ್ (60,150 ರೂ)
  • ಸೌದಿ ಅರೇಬಿಯಾ: 2,640 ಸೌದಿ ರಿಯಾಲ್ (58,698 ರುಪಾಯಿ)
  • ಓಮನ್: 278.50 ಒಮಾನಿ ರಿಯಾಲ್ (60,250 ರುಪಾಯಿ)
  • ಕುವೇತ್: 219 ಕುವೇತಿ ದಿನಾರ್ (59,415 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,260 ರೂ
  • ಚೆನ್ನೈ: 8,650 ರೂ
  • ಮುಂಬೈ: 8,300 ರೂ
  • ದೆಹಲಿ: 8,300 ರೂ
  • ಕೋಲ್ಕತಾ: 8,300 ರೂ
  • ಕೇರಳ: 8,650 ರೂ
  • ಅಹ್ಮದಾಬಾದ್: 8,300 ರೂ
  • ಜೈಪುರ್: 8,300 ರೂ
  • ಲಕ್ನೋ: 8,300 ರೂ
  • ಭುವನೇಶ್ವರ್: 8,650 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:00 am, Mon, 6 May 24

Follow Us
Web contact
Web contact

TV9 Kannada

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ