AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates: ವಾರಾಂತ್ಯದ ಇಳಿಕೆ ಬಳಿಕ ಚಿನ್ನ ಮತ್ತು ಬೆಳ್ಳಿ ಮತ್ತೆ ತುಸು ದುಬಾರಿ; ವಿವಿಧೆಡೆ ಈಗೆಷ್ಟಿದೆ ದರ?

Bullion Market 2023, May 9th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,600 ರುಪಾಯಿಗೆ ಏರಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,750 ರುಪಾಯಿ ಆಗಿದೆ. ಬೆಳ್ಳಿ ಬೆಲೆಯೂ ಸದ್ಯ ಗ್ರಾಮ್​ಗೆ 78.10 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Rates: ವಾರಾಂತ್ಯದ ಇಳಿಕೆ ಬಳಿಕ ಚಿನ್ನ ಮತ್ತು ಬೆಳ್ಳಿ ಮತ್ತೆ ತುಸು ದುಬಾರಿ; ವಿವಿಧೆಡೆ ಈಗೆಷ್ಟಿದೆ ದರ?
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 09, 2023 | 5:00 AM

Share

ಮುಖ್ಯಾಂಶಗಳು

  • ಭಾರತದಲ್ಲಿ ಮೆ 9ರಂದು 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ 56,600 ರುಪಾಯಿ. 100 ಗ್ರಾಮ್ ಬೆಳ್ಳಿ ಬೆಲೆ 7,810 ರೂ ಇದೆ.
  • ಅನಿವಾಸಿ ಭಾರತೀಯರು ಹೆಚ್ಚಾಗಿ ನೆಲಸಿರುವ ಅಮೆರಿಕ, ದುಬೈ, ಮಲೇಷ್ಯಾ, ಸಿಂಗಾಪುರ ಮೊದಲಾದೆಡೆಯೂ ಚಿನ್ನದ ಬೆಲೆ ಏರಿದೆ.
  • ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,650 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,270 ರೂ ಇದೆ.

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ಮತ್ತೆ ಹೊಯ್ದಾಟಕ್ಕೆ ನಿಂತಿವೆ. ಕಳೆದ ವಾರ ಮೂರ್ನಾಲ್ಕು ದಿನ ಏರಿಕೆ ಕಂಡು ದುಬಾರಿಯಾಗಿದ್ದ ಈ ಲೋಹಗಳ ಬೆಲೆ ವಾರಾಂತ್ಯದಲ್ಲಿ ಅಗ್ಗಗೊಂಡಿತ್ತು. ಈಗ ಮತ್ತೆ ದುಬಾರಿಯಾಗತೊಡಗಿದೆ. ಭಾರತದಲ್ಲಿ ಮಾತ್ರವಲ್ಲ ಬಹುತೇಕ ಎಲ್ಲಾ ದೇಶಗಳಲ್ಲೂ ಚಿನ್ನದ ಬೆಲೆ ಹೆಚ್ಚುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,810 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,270 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ:

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 9ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,750 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 781 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,800 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 827 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,650 ರೂ
  • ಚೆನ್ನೈ: 57,100 ರೂ
  • ಮುಂಬೈ: 56,600 ರೂ
  • ದೆಹಲಿ: 56,750 ರೂ
  • ಕೋಲ್ಕತಾ: 56,600 ರೂ
  • ಕೇರಳ: 56,600 ರೂ
  • ಅಹ್ಮದಾಬಾದ್: 56,650 ರೂ
  • ಜೈಪುರ್: 56,750 ರೂ
  • ಲಕ್ನೋ: 56,750 ರೂ
  • ಭುವನೇಶ್ವರ್: 56,600 ರೂ

ಇದನ್ನೂ ಓದಿ:

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,880 ರಿಂಗಿಟ್ (53,079 ರುಪಾಯಿ)
  • ದುಬೈ: 2270 ಡಿರಾಮ್ (50,555 ರುಪಾಯಿ)
  • ಅಮೆರಿಕ: 620 ಡಾಲರ್ (50,705 ರುಪಾಯಿ)
  • ಸಿಂಗಾಪುರ: 833 ಸಿಂಗಾಪುರ್ ಡಾಲರ್ (51,434 ರುಪಾಯಿ)
  • ಕತಾರ್: 2,330 ಕತಾರಿ ರಿಯಾಲ್ (52,333 ರೂ)
  • ಓಮನ್: 247 ಒಮಾನಿ ರಿಯಾಲ್ (52,535 ರುಪಾಯಿ)
  • ಕುವೇತ್: 192 ಕುವೇತಿ ದಿನಾರ್ (51,241 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,270 ರೂ
  • ಚೆನ್ನೈ: 8,270 ರೂ
  • ಮುಂಬೈ: 7,810 ರೂ
  • ದೆಹಲಿ: 7,810 ರೂ
  • ಕೋಲ್ಕತಾ: 7,810 ರೂ
  • ಕೇರಳ: 8,270 ರೂ
  • ಅಹ್ಮದಾಬಾದ್: 7,810 ರೂ
  • ಜೈಪುರ್: 7,810 ರೂ
  • ಲಕ್ನೋ: 7,81 ರೂ
  • ಭುವನೇಶ್ವರ್: 8,270 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ