AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 10th November: ಚಿನ್ನದ ಬೆಲೆ 10 ದಿನದಲ್ಲಿ ಗ್ರಾಮ್​ಗೆ 185 ರೂಗಳಷ್ಟು ಇಳಿಕೆ

Bullion Market 2024 November 10th: ವಾರಾಂತ್ಯದಲ್ಲಿ ಚಿನ್ನದ ಬೆಲೆ ತುಸು ಇಳಿಕೆ ಆಗಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಇಳಿಕೆಯಾಗಿರುವುದು ಗ್ರಾಮ್​ಗೆ 185 ರೂಗಳಷ್ಟು. ಬೆಳ್ಳಿ ಬೆಲೆಯೂ ಹತ್ತು ದಿನದಲ್ಲಿ 6 ರೂನಷ್ಟು ಬೆಲೆ ಇಳಿಕೆ ಕಂಡಿದೆ.

Gold Silver Price on 10th November: ಚಿನ್ನದ ಬೆಲೆ 10 ದಿನದಲ್ಲಿ ಗ್ರಾಮ್​ಗೆ 185 ರೂಗಳಷ್ಟು ಇಳಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 10, 2024 | 10:00 AM

Share

ಬೆಂಗಳೂರು, ನವೆಂಬರ್ 10: ಚಿನ್ನದ ಬೆಲೆ ವಾರಾಂತ್ಯದಲ್ಲಿ ಅಲ್ಪ ಇಳಿಕೆ ಕಂಡಿದೆ. ಗ್ರಾಮ್​ಗೆ 10 ರೂನಷ್ಟು ಇಳಿಕೆ ಆಗಿದೆ. 7,285 ರೂ ಇದ್ದ ಬೆಲೆ 7,275ರೂಗೆ ಕುಸಿದಿದೆ. ಇದೇ ವೇಳೆ, ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. 94 ಮತ್ತು 103 ರೂ ಬೆಲೆ ಮುಂದುವರಿದಿದೆ. ಕಳೆದ 10 ದಿನದಲ್ಲಿ ಬೆಳ್ಳಿ ಬೆಲೆ ಆರು ರೂನಷ್ಟು ಇಳಿಕೆ ಕಂಡಿದೆ. ನವೆಂಬರ್ 1 ಮತ್ತು 7ರಂದು ತಲಾ ಮೂರು ರೂಗಳಂತೆ ಬೆಲೆ ಇಳಿಕೆ ಆಗಿದ್ದರ ಪರಿಣಾಮವಾಗಿ ಬೆಳ್ಳಿ ತುಸು ಅಗ್ಗಗೊಂಡಿದೆ. ಚಿನ್ನದ ಬೆಲೆಯೂ ಹತ್ತು ದಿನದಲ್ಲಿ ಗಮನಾರ್ಹ ಎನಿಸುವಷ್ಟು ಇಳಿಕೆ ಕಂಡಿದೆ. 22 ಕ್ಯಾರಟ್​ನ ಆಭರಣ ಚಿನ್ನದ ಬೆಲೆ ಈ ತಿಂಗಳ ಆರಂಭದಲ್ಲಿ 7,455 ರೂ ಇತ್ತು. ಈಗ ಅದು 7,275 ರೂ ತಲುಪಿದೆ. ಗ್ರಾಮ್​ಗೆ 180 ರೂನಷ್ಟು ಬೆಲೆ ಇಳಿಕೆ ಆಗಿದೆ. ಇದೇ ವೇಳೆ ವಿದೇಶದ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 72,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 79,360 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 72,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 10ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,360 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,520 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 94 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,360 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 94 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 72,750 ರೂ
  • ಚೆನ್ನೈ: 72,750 ರೂ
  • ಮುಂಬೈ: 72,750 ರೂ
  • ದೆಹಲಿ: 72,900 ರೂ
  • ಕೋಲ್ಕತಾ: 72,750 ರೂ
  • ಕೇರಳ: 72,750 ರೂ
  • ಅಹ್ಮದಾಬಾದ್: 72,800 ರೂ
  • ಜೈಪುರ್: 72,900 ರೂ
  • ಲಕ್ನೋ: 72,900 ರೂ
  • ಭುವನೇಶ್ವರ್: 72,750 ರೂ

ಇದನ್ನೂ ಓದಿ: ಭಾರತದ ಫಾರೆಕ್ಸ್ ರಿಸರ್ವ್ಸ್ ಈ ವಾರವೂ ಕುಸಿತ; ಆದರೂ ನಾಲ್ಕನೇ ಸ್ಥಾನದಲ್ಲಿ ಭಾರತ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,680 ರಿಂಗಿಟ್ (70,870 ರುಪಾಯಿ)
  • ದುಬೈ: 3,070 ಡಿರಾಮ್ (70,540 ರುಪಾಯಿ)
  • ಅಮೆರಿಕ: 820 ಡಾಲರ್ (69,200 ರುಪಾಯಿ)
  • ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (70,620 ರುಪಾಯಿ)
  • ಕತಾರ್: 3,080 ಕತಾರಿ ರಿಯಾಲ್ (71,310 ರೂ)
  • ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,300 ರುಪಾಯಿ)
  • ಓಮನ್: 324.50 ಒಮಾನಿ ರಿಯಾಲ್ (71,120 ರುಪಾಯಿ)
  • ಕುವೇತ್: 248.30 ಕುವೇತಿ ದಿನಾರ್ (68,330 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,400 ರೂ
  • ಚೆನ್ನೈ: 10,300 ರೂ
  • ಮುಂಬೈ: 9,400 ರೂ
  • ದೆಹಲಿ: 9,400 ರೂ
  • ಕೋಲ್ಕತಾ: 9,400 ರೂ
  • ಕೇರಳ: 10,300 ರೂ
  • ಅಹ್ಮದಾಬಾದ್: 9,400 ರೂ
  • ಜೈಪುರ್: 9,400 ರೂ
  • ಲಕ್ನೋ: 9,400 ರೂ
  • ಭುವನೇಶ್ವರ್: 10,300 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’