Gold Silver Price on 12th November: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2024 November 12th: ಚಿನ್ನದ ಬೆಲೆ ಮತ್ತಷ್ಟು ಕಡಿಮೆ ಆಗಿದೆ. ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆ ಗ್ರಾಮ್​ಗೆ 100 ರೂಗೂ ಹೆಚ್ಚು ಇಳಿಕೆ ಆಗಿದೆ. ಬೆಳ್ಳಿಯೂ ಸತತವಾಗಿ ಅಗ್ಗಗೊಳ್ಳುತ್ತಿದೆ.

Gold Silver Price on 12th November: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Nov 12, 2024 | 10:07 AM

ಬೆಂಗಳೂರು, ನವೆಂಬರ್ 12: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸತತ ಇಳಿಕೆ ಮುಂದುವರಿದಿದೆ. ಇಂದು ಮಂಗಳವಾರವೂ ಈ ಎರಡು ಲೋಹಗಳ ದರ ಕಡಿಮೆ ಆಗಿದೆ. ಬೆಳ್ಳಿ ಬೆಲೆ ಕಳೆದ 10 ದಿನಗಳಿಂದ ಗ್ರಾಮ್​ಗೆ 4 ರೂಗೂ ಹೆಚ್ಚು ಮೊತ್ತದಷ್ಟು ಕಡಿಮೆಗೊಂಡಿದೆ. ಚಿನ್ನದ ಬೆಲೆಯೂ ಗ್ರಾಮ್​ಗೆ 155 ರೂಗಳಷ್ಟು ಕಡಿಮೆ ಆಗಿದೆ. ಅಪರಂಜಿ ಚಿನ್ನದ ಬೆಲೆ 7,900 ರೂ ಒಳಗೆ ಬಂದಿದೆ. ಇದೇ ವೇಳೆ, ವಿದೇಶದ ಮಾರುಕಟ್ಟೆಗಳಲ್ಲಿ ಚಿನ್ನ, ಬೆಳ್ಳಿ ಬೆಲೆಗಳಲ್ಲಿ ಕಳೆದ ಹಲವು ವಾರಗಳಿಂದ ವ್ಯತ್ಯಯಗಳೇ ಆಗುತ್ತಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 72,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 78,700 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,290 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 72,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,290 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 12ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,700 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,020 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 92.90 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,700 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 92.90 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 72,150 ರೂ
  • ಚೆನ್ನೈ: 72,150 ರೂ
  • ಮುಂಬೈ: 72,150 ರೂ
  • ದೆಹಲಿ: 72,300 ರೂ
  • ಕೋಲ್ಕತಾ: 72,150 ರೂ
  • ಕೇರಳ: 72,150 ರೂ
  • ಅಹ್ಮದಾಬಾದ್: 72,200 ರೂ
  • ಜೈಪುರ್: 72,300 ರೂ
  • ಲಕ್ನೋ: 72,300 ರೂ
  • ಭುವನೇಶ್ವರ್: 72,150 ರೂ

ಇದನ್ನೂ ಓದಿ: Petrol Diesel Price on November 12: ಲಕ್ನೋ, ಉತ್ತರ ಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,680 ರಿಂಗಿಟ್ (70,150 ರುಪಾಯಿ)
  • ದುಬೈ: 3,070 ಡಿರಾಮ್ (70,540 ರುಪಾಯಿ)
  • ಅಮೆರಿಕ: 820 ಡಾಲರ್ (69,210 ರುಪಾಯಿ)
  • ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (70,100 ರುಪಾಯಿ)
  • ಕತಾರ್: 3,080 ಕತಾರಿ ರಿಯಾಲ್ (71,310 ರೂ)
  • ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,310 ರುಪಾಯಿ)
  • ಓಮನ್: 324.50 ಒಮಾನಿ ರಿಯಾಲ್ (71,130 ರುಪಾಯಿ)
  • ಕುವೇತ್: 248.30 ಕುವೇತಿ ದಿನಾರ್ (68,210 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,290 ರೂ
  • ಚೆನ್ನೈ: 10,190 ರೂ
  • ಮುಂಬೈ: 9,290 ರೂ
  • ದೆಹಲಿ: 9,290 ರೂ
  • ಕೋಲ್ಕತಾ: 9,290 ರೂ
  • ಕೇರಳ: 10,190 ರೂ
  • ಅಹ್ಮದಾಬಾದ್: 9,290 ರೂ
  • ಜೈಪುರ್: 9,290 ರೂ
  • ಲಕ್ನೋ: 9,290 ರೂ
  • ಭುವನೇಶ್ವರ್: 10,190 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us