Gold Silver Price on 14 November: ಚಿನ್ನ ಮತ್ತು ಬೆಳ್ಳಿ ಎರಡೂ ಮತ್ತಷ್ಟು ಅಗ್ಗ; ಇವತ್ತಿನ ದರವೆಷ್ಟು, ಇಲ್ಲಿದೆ ವಿವರ

Bullion Market 2023, November 14th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,490 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 72.40 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 55,450 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,175 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 14 November: ಚಿನ್ನ ಮತ್ತು ಬೆಳ್ಳಿ ಎರಡೂ ಮತ್ತಷ್ಟು ಅಗ್ಗ; ಇವತ್ತಿನ ದರವೆಷ್ಟು, ಇಲ್ಲಿದೆ ವಿವರ
ಚಿನ್ನ
Edited By:

Updated on: Nov 14, 2023 | 5:00 AM

ಬೆಂಗಳೂರು, ನವೆಂಬರ್ 14: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಮತ್ತಷ್ಟು ಇಳಿದಿವೆ. ಭಾರತ ಹಾಗೂ ಬಹುತೇಕ ದೇಶಗಳಲ್ಲಿ ಚಿನ್ನದ ಬೆಲೆ ಕಡಿಮೆ ಆಗಿದೆ. ಸಿಂಗಾಪುರ ಮೊದಲಾದ ಕೆಲ ದೇಶಗಳಲ್ಲಿ ಮಾತ್ರ ತುಸು ಏರಿದೆ. ಮಲೇಷ್ಯಾದಲ್ಲಿ ಕೆಲ ವಾರದಿಂದಲೂ ಚಿನ್ನದ ಬೆಲೆ ಸ್ಥಿರವಾಗಿದೆ. ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಸತತವಾಗಿ ಇಳಿಯುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,490 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,240 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,175 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 14ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,490 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 724 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,490 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 717.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,450 ರೂ
  • ಚೆನ್ನೈ: 56,900 ರೂ
  • ಮುಂಬೈ: 55,450 ರೂ
  • ದೆಹಲಿ: 55,600 ರೂ
  • ಕೋಲ್ಕತಾ: 55,450 ರೂ
  • ಕೇರಳ: 55,450 ರೂ
  • ಅಹ್ಮದಾಬಾದ್: 55,500 ರೂ
  • ಜೈಪುರ್: 55,600 ರೂ
  • ಲಕ್ನೋ: 55,600 ರೂ
  • ಭುವನೇಶ್ವರ್: 55,450 ರೂ

ಇದನ್ನೂ ಓದಿ: ನಿರೀಕ್ಷೆಗಿಂತಲೂ ಮುಂಚೆಯೇ ಬರಲಿದೆ ಪಿಎಂ ಕಿಸಾನ್ 15ನೇ ಕಂತಿನ ಹಣ; ಇಲ್ಲಿದೆ ಬಿಡುಗಡೆ ದಿನಾಂಕ, ಫಲಾನುಭವಿಗಳ ಪಟ್ಟಿ ಮೊದಲಾದ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (52,730 ರುಪಾಯಿ)
  • ದುಬೈ: 2,172.50 ಡಿರಾಮ್ (49,262 ರುಪಾಯಿ)
  • ಅಮೆರಿಕ: 595 ಡಾಲರ್ (49,555 ರುಪಾಯಿ)
  • ಸಿಂಗಾಪುರ: 821 ಸಿಂಗಾಪುರ್ ಡಾಲರ್ (50,308 ರುಪಾಯಿ)
  • ಕತಾರ್: 2,240 ಕತಾರಿ ರಿಯಾಲ್ (51,251 ರೂ)
  • ಸೌದಿ ಅರೇಬಿಯಾ: 2,240 ಸೌದಿ ರಿಯಾಲ್ (49,751 ರುಪಾಯಿ)
  • ಓಮನ್: 236.50 ಒಮಾನಿ ರಿಯಾಲ್ (51,177 ರುಪಾಯಿ)
  • ಕುವೇತ್: 187.50 ಕುವೇತಿ ದಿನಾರ್ (50,563 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,175 ರೂ
  • ಚೆನ್ನೈ: 7,540 ರೂ
  • ಮುಂಬೈ: 7,240 ರೂ
  • ದೆಹಲಿ: 7,240 ರೂ
  • ಕೋಲ್ಕತಾ: 7,240 ರೂ
  • ಕೇರಳ: 7,540 ರೂ
  • ಅಹ್ಮದಾಬಾದ್: 7,240 ರೂ
  • ಜೈಪುರ್: 7,240 ರೂ
  • ಲಕ್ನೋ: 7,240 ರೂ
  • ಭುವನೇಶ್ವರ್: 7,540 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us