ಬೆಂಗಳೂರು, ನವೆಂಬರ್ 14: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಏರಿದಷ್ಟೇ ವೇಗದಲ್ಲಿ ಝರ್ರನೆ ಜಾರುತ್ತಿವೆ. ಈ ಎರಡೂ ಲೋಹಗಳ ಬೆಲೆ ಭಾರೀ ಮೊತ್ತದಷ್ಟು ಇಳಿಕೆ ಆಗುತ್ತಿದೆ. ಚಿನ್ನದ ಬೆಲೆ ಇಂದು ಗುರುವಾರ ಗ್ರಾಮ್ಗೆ 110 ರೂನಷ್ಟು ಕುಸಿತ ಕಂಡಿದೆ. ಅಪರಂಜಿ ಚಿನ್ನದ ಬೆಲೆ 120 ರೂನಷ್ಟು ಇಳಿದಿದೆ. ಕಳೆದ ಹತ್ತು ದಿನದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ ಬರೋಬ್ಬರಿ 435 ರೂನಷ್ಟು ಕುಸಿತ ಕಂಡಿದೆ. ಅಂದರೆ, ಕಿಲೋಗೆ 4 ಲಕ್ಷ ರೂಗೂ ಅಧಿಕ ಮೊತ್ತದಷ್ಟು ಬೆಲೆ ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಕುಸಿತದದಲ್ಲಿ ಚಿನ್ನಕ್ಕೆ ಪೈಪೋಟಿ ನೀಡುತ್ತಿದೆ. ಚೆನ್ನೈ ಮೊದಲಾದ ಕೆಲ ನಗರಗಳಲ್ಲಿ ಬಹಳ ದಿನಗಳ ಬಳಿಕ ಮೊದಲ ಬಾರಿಗೆ 100 ರೂ ಒಳಗೆ ಇಳಿದಿದೆ. ಬೆಂಗಳೂರಿನಲ್ಲೂ ಬೆಲೆ 90 ರೂಗಿಂತ ಒಳಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 69,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 75,650 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,950 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 69,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,950 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Petrol Diesel Price on November 14: ಮಹಾರಾಷ್ಟ್ರ, ಬಿಹಾರದಲ್ಲಿ ಪೆಟ್ರೋಲ್ ದರ ಇಳಿಕೆ
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ