Gold Silver Price on 16 November: ಭರ್ಜರಿಯಾಗಿ ಏರುತ್ತಿರುವ ಚಿನ್ನ, ಬೆಳ್ಳಿ ಬೆಲೆ; ಅಮೆರಿಕದ ಬಡ್ಡಿದರ ಇಳಿಕೆ ಸಾಧ್ಯತೆಯ ಪರಿಣಾಮವಾ ಇದು?

Bullion Market 2023, November 16th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,040 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.70 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 55,950 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,150 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 16 November: ಭರ್ಜರಿಯಾಗಿ ಏರುತ್ತಿರುವ ಚಿನ್ನ, ಬೆಳ್ಳಿ ಬೆಲೆ; ಅಮೆರಿಕದ ಬಡ್ಡಿದರ ಇಳಿಕೆ ಸಾಧ್ಯತೆಯ ಪರಿಣಾಮವಾ ಇದು?
ಚಿನ್ನ
Edited By:

Updated on: Nov 16, 2023 | 5:00 AM

ಬೆಂಗಳೂರು, ನವೆಂಬರ್ 16: ದೀಪಾವಳಿ ಹಬ್ಬದ ಬಳಿಕ ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and silver Rates) ಏರಿಕೆ ಆಗುವುದು ಮುಂದುವರಿದಿದೆ. ದೇಶ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಎರಡೂ ಕೂಡ ತೀಕ್ಷ್ಣ ಬೆಲೆ ಏರಿಕೆ ಕಂಡಿವೆ. ಅಮೆರಿಕದಲ್ಲಿ ಅಲ್ಲಿನ ಫೆಡರಲ್ ರಿಸರ್ವ್ ತನ್ನ ಬಡ್ಡಿದರವನ್ನು ಇನ್ನಷ್ಟು ಏರಿಸುವ ಸಾಧ್ಯತೆ ಇಲ್ಲ ಎನ್ನುವುದು ಸ್ಪಷ್ಟವಾಗುತ್ತಿರುವಂತೆಯೇ ಹೂಡಿಕೆದಾರರು ಚಿನ್ನದ ಮೊರೆ ಹೋಗುತ್ತಿದ್ದಾರೆ. ಈ ಬಾರಿಯ ಬೆಲೆ ಏರಿಕೆ ದೀರ್ಘಕಾಲದ್ದಾಗಿರಲಿದ್ದು, ಸಾವರೀನ್ ಗೋಲ್ಡ್ ಬಾಂಡ್ ಇತ್ಯಾದಿ ಗೋಲ್ಡ್ ಸ್ಕೀಮ್​ನಲ್ಲಿ ಹಣ ತೊಡಗಿಸಿದವರು ನಿರಾಳರಾಗಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,470 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,150 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 16ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,040 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 747 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,040 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 715 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,950 ರೂ
  • ಚೆನ್ನೈ: 56,450 ರೂ
  • ಮುಂಬೈ: 55,950 ರೂ
  • ದೆಹಲಿ: 56,100 ರೂ
  • ಕೋಲ್ಕತಾ: 55,950 ರೂ
  • ಕೇರಳ: 55,950 ರೂ
  • ಅಹ್ಮದಾಬಾದ್: 56,000 ರೂ
  • ಜೈಪುರ್: 56,100 ರೂ
  • ಲಕ್ನೋ: 56,100 ರೂ
  • ಭುವನೇಶ್ವರ್: 55,950 ರೂ

ಇದನ್ನೂ ಓದಿ: Arecanut Price 15 Nov: ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (53,000 ರುಪಾಯಿ)
  • ದುಬೈ: 2,210 ಡಿರಾಮ್ (49,996 ರುಪಾಯಿ)
  • ಅಮೆರಿಕ: 605 ಡಾಲರ್ (50,273 ರುಪಾಯಿ)
  • ಸಿಂಗಾಪುರ: 823 ಸಿಂಗಾಪುರ್ ಡಾಲರ್ (50,727 ರುಪಾಯಿ)
  • ಕತಾರ್: 2,270 ಕತಾರಿ ರಿಯಾಲ್ (51,730 ರೂ)
  • ಸೌದಿ ಅರೇಬಿಯಾ: 2,280 ಸೌದಿ ರಿಯಾಲ್ (50,517 ರುಪಾಯಿ)
  • ಓಮನ್: 240.50 ಒಮಾನಿ ರಿಯಾಲ್ (51,910 ರುಪಾಯಿ)
  • ಕುವೇತ್: 190 ಕುವೇತಿ ದಿನಾರ್ (51,206 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,150 ರೂ
  • ಚೆನ್ನೈ: 7,770 ರೂ
  • ಮುಂಬೈ: 7,470 ರೂ
  • ದೆಹಲಿ: 7,470 ರೂ
  • ಕೋಲ್ಕತಾ: 7,470 ರೂ
  • ಕೇರಳ: 7,770 ರೂ
  • ಅಹ್ಮದಾಬಾದ್: 7,470 ರೂ
  • ಜೈಪುರ್: 7,470 ರೂ
  • ಲಕ್ನೋ: 7,470 ರೂ
  • ಭುವನೇಶ್ವರ್: 7,770 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Web contact

TV9 Kannada

Read More
Follow Us