Gold Silver Price on 19th November: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಬೆಂಗಳೂರಿನಲ್ಲಿ 7,707 ರೂಗೆ ಏರಿದ ಅಪರಂಜಿ ಚಿನ್ನದ ಬೆಲೆ

Bullion Market 2024 November 19th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ದಿಢೀರ್ ಹೆಚ್ಚಳ ಕಂಡಿವೆ. ಎರಡು ವಾರಗಳಿಂದ ಇಳಿಯುತ್ತಿದ್ದ ಬೆಲೆಗಳು ಇವತ್ತು ಏರಿಕೆಯಾಗಿವೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,707 ರೂಗೆ ಏರಿದೆ. 18 ಕ್ಯಾರಟ್ ಚಿನ್ನದ ಬೆಲೆ 5,800 ರೂ ಸಮೀಪಕ್ಕೆ ಹೋಗಿದೆ.

Gold Silver Price on 19th November: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಬೆಂಗಳೂರಿನಲ್ಲಿ 7,707 ರೂಗೆ ಏರಿದ ಅಪರಂಜಿ ಚಿನ್ನದ ಬೆಲೆ
ಚಿನ್ನ

Updated on: Nov 19, 2024 | 10:48 AM

ಬೆಂಗಳೂರು, ನವೆಂಬರ್ 19: ಹಲವು ದಿನಗಳಿಂದ ಸತತವಾಗಿ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಮಂಗಳವಾರ ಭರ್ಜರಿ ಏರಿಕೆ ಕಂಡಿವೆ. 22 ಕ್ಯಾರಟ್ ಚಿನ್ನದ ಬೆಲೆ 7,000 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆ 7,700 ರೂ ಗಡಿ ದಾಟಿದೆ. ಬೆಳ್ಳಿ ಬೆಲೆ ಚೆನ್ನೈ ಮೊದಲಾದೆಡೆ 100 ರೂ ಗಡಿ ದಾಟಿದೆ. ಬೆಂಗಳೂರಿನಲ್ಲಿ ಬೆಲೆ 91 ರೂಗಿಂತ ತುಸು ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 70,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,070 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 70,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,150 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 19ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,070 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,810 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 91.50 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,070 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 91.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 70,650 ರೂ
  • ಚೆನ್ನೈ: 70,650 ರೂ
  • ಮುಂಬೈ: 70,650 ರೂ
  • ದೆಹಲಿ: 70,800 ರೂ
  • ಕೋಲ್ಕತಾ: 70,650 ರೂ
  • ಕೇರಳ: 70,650 ರೂ
  • ಅಹ್ಮದಾಬಾದ್: 70,700 ರೂ
  • ಜೈಪುರ್: 70,800 ರೂ
  • ಲಕ್ನೋ: 70,800 ರೂ
  • ಭುವನೇಶ್ವರ್: 70,650 ರೂ

ಇದನ್ನೂ ಓದಿ: ನೇರ ತೆರಿಗೆ ಸಂಗ್ರಹ; 22 ಲಕ್ಷ ಕೋಟಿ ರೂ ಗುರಿ ಮುಟ್ಟುವ ನಿರೀಕ್ಷೆಯಲ್ಲಿ ಸರ್ಕಾರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (68,620 ರುಪಾಯಿ)
  • ದುಬೈ: 2,920 ಡಿರಾಮ್ (67,100 ರುಪಾಯಿ)
  • ಅಮೆರಿಕ: 780 ಡಾಲರ್ (65,840 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,510 ರುಪಾಯಿ)
  • ಕತಾರ್: 2,955 ಕತಾರಿ ರಿಯಾಲ್ (68,420 ರೂ)
  • ಸೌದಿ ಅರೇಬಿಯಾ: 2,980 ಸೌದಿ ರಿಯಾಲ್ (67,100 ರುಪಾಯಿ)
  • ಓಮನ್: 311.50 ಒಮಾನಿ ರಿಯಾಲ್ (68,290 ರುಪಾಯಿ)
  • ಕುವೇತ್: 238.60 ಕುವೇತಿ ದಿನಾರ್ (65,520 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,150 ರೂ
  • ಚೆನ್ನೈ: 10,100 ರೂ
  • ಮುಂಬೈ: 9,150 ರೂ
  • ದೆಹಲಿ: 9,150 ರೂ
  • ಕೋಲ್ಕತಾ: 9,150 ರೂ
  • ಕೇರಳ: 10,100 ರೂ
  • ಅಹ್ಮದಾಬಾದ್: 9,150 ರೂ
  • ಜೈಪುರ್: 9,150 ರೂ
  • ಲಕ್ನೋ: 9,150 ರೂ
  • ಭುವನೇಶ್ವರ್: 10,100 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us