Gold Silver Price on 1 November: ಈ ವಾರ ಚಿನ್ನ, ಬೆಳ್ಳಿ ಬೆಲೆ ಇಳಿಕೆ ಮುಂದುವರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2023, November 1st: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,850 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.30 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,700 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 1 November: ಈ ವಾರ ಚಿನ್ನ, ಬೆಳ್ಳಿ ಬೆಲೆ ಇಳಿಕೆ ಮುಂದುವರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Edited By:

Updated on: Nov 01, 2023 | 5:00 AM

ಬೆಂಗಳೂರು, ನವೆಂಬರ್ 1: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಎರಡೂ ಇಂದು ತಗ್ಗಿವೆ. ಭಾರತದಲ್ಲಿ ಎಲ್ಲೆಡೆ ಚಿನ್ನದ ಬೆಲೆ ಇಳಿದಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಏರಿದೆ, ಇನ್ನೂ ಕೆಲವೆಡೆ ಯಥಾಸ್ಥಿತಿ ಇದೆ. ಬೆಳ್ಳಿ ಬೆಲೆಯೂ ಭಾರತದಲ್ಲಿ ಕಡಿಮೆ ಆಗಿದೆ. ಕಳೆದ ಮೂರು ವಾರಗಳಿಂದ ಸತತವಾಗಿ ಏರಿಕೆ ಆಗಿದ್ದ ಈ ಎರಡೂ ಲೋಹಗಳ ಬೆಲೆ ಈ ವಾರ ಇಳಿಕೆಯ ಹಾದಿಯಲ್ಲಿರುವಂತೆ ತೋರುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,850 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,520 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 1ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,850 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 753 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,850 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,700 ರೂ
  • ಚೆನ್ನೈ: 57,150 ರೂ
  • ಮುಂಬೈ: 56,700 ರೂ
  • ದೆಹಲಿ: 56,850 ರೂ
  • ಕೋಲ್ಕತಾ: 56,700 ರೂ
  • ಕೇರಳ: 56,700 ರೂ
  • ಅಹ್ಮದಾಬಾದ್: 56,750 ರೂ
  • ಜೈಪುರ್: 56,850 ರೂ
  • ಲಕ್ನೋ: 56,850 ರೂ
  • ಭುವನೇಶ್ವರ್: 56,700 ರೂ

ಇದನ್ನೂ ಓದಿ: ಗಗನಕ್ಕೇರಿದ ಈರುಳ್ಳಿ ಬೆಲೆ, ರೈತರಿಗೆ ದೊರೆಯುತ್ತಿಲ್ಲ ಪ್ರಯೋಜನ: ಮಧ್ಯವರ್ತಿಗಳು, ವ್ಯಾಪಾರಿಗಳಿಗಷ್ಟೇ ಲಾಭ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (52,056 ರುಪಾಯಿ)
  • ದುಬೈ: 2,237.50 ಡಿರಾಮ್ (50,708 ರುಪಾಯಿ)
  • ಅಮೆರಿಕ: 615 ಡಾಲರ್ (51,194 ರುಪಾಯಿ)
  • ಸಿಂಗಾಪುರ: 848 ಸಿಂಗಾಪುರ್ ಡಾಲರ್ (51,678 ರುಪಾಯಿ)
  • ಕತಾರ್: 2,300 ಕತಾರಿ ರಿಯಾಲ್ (52,476 ರೂ)
  • ಸೌದಿ ಅರೇಬಿಯಾ: 2,310 ಸೌದಿ ರಿಯಾಲ್ (51,246 ರುಪಾಯಿ)
  • ಓಮನ್: 243 ಒಮಾನಿ ರಿಯಾಲ್ (52,533 ರುಪಾಯಿ)
  • ಕುವೇತ್: 192.50 ಕುವೇತಿ ದಿನಾರ್ (51,819 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,820 ರೂ
  • ಮುಂಬೈ: 7,530 ರೂ
  • ದೆಹಲಿ: 7,530 ರೂ
  • ಕೋಲ್ಕತಾ: 7,530 ರೂ
  • ಕೇರಳ: 7,82 ರೂ
  • ಅಹ್ಮದಾಬಾದ್: 7,530 ರೂ
  • ಜೈಪುರ್: 7,530 ರೂ
  • ಲಕ್ನೋ: 7,530 ರೂ
  • ಭುವನೇಶ್ವರ್: 7,820 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us