AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 20 November: ಚಿನ್ನದ ಬೆಲೆ ಹೈಜಂಪ್; ಬೆಳ್ಳಿ ಇನ್ನಷ್ಟು ದುಬಾರಿ; ಭಾರತ ಹಾಗೂ ವಿದೇಶಗಳಲ್ಲಿ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2023, November 20th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,690 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,550 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,525 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 20 November: ಚಿನ್ನದ ಬೆಲೆ ಹೈಜಂಪ್; ಬೆಳ್ಳಿ ಇನ್ನಷ್ಟು ದುಬಾರಿ; ಭಾರತ ಹಾಗೂ ವಿದೇಶಗಳಲ್ಲಿ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
TV9 Web
| Edited By: |

Updated on: Nov 20, 2023 | 5:00 AM

Share

ಬೆಂಗಳೂರು, ನವೆಂಬರ್ 20: ಕಳೆದ ವಾರ ತೀಕ್ಷ್ಣವಾಗಿ ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಶಾಂತಗೊಂಡಿವೆ. ಭಾರತದಲ್ಲಿ ಬಹುತೇಕ ಯಥಾಸ್ಥಿತಿಯಲ್ಲಿವೆ. ಬೇರೆ ಕೆಲ ದೇಶಗಳಲ್ಲಿ ಚಿನ್ನದ ಬೆಲೆ ತುಸು ಕಡಿಮೆ ಆಗಿದೆ. ಅಮೆರಿಕದ ಬಡ್ಡಿದರ ಏರಿಕೆ ಸಾಧ್ಯತೆಯ ಕಾವು ಸದ್ಯಕ್ಕೆ ಕಡಿಮೆ ಆದಂತಿದೆ. ಈ ವಾರದ ಮುಂದಿನ ದಿನಗಳಲ್ಲಿ ಹೂಡಿಕೆದಾರರ ಚಿತ್ತ ಎತ್ತ ಹರಿಯುತ್ತದೆ ಗಮನಿಸಬೇಕು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,525 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 20ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,690 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,690 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 752.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,550 ರೂ
  • ಚೆನ್ನೈ: 57,000 ರೂ
  • ಮುಂಬೈ: 56,550 ರೂ
  • ದೆಹಲಿ: 56,700 ರೂ
  • ಕೋಲ್ಕತಾ: 56,550 ರೂ
  • ಕೇರಳ: 56,550 ರೂ
  • ಅಹ್ಮದಾಬಾದ್: 56,600 ರೂ
  • ಜೈಪುರ್: 56,700 ರೂ
  • ಲಕ್ನೋ: 56,700 ರೂ
  • ಭುವನೇಶ್ವರ್: 56,550 ರೂ

ಇದನ್ನೂ ಓದಿ: ಪಿಪಿಎಫ್ ಸೇರಿದಂತೆ ಸರ್ಕಾರದ ಕೆಲ ಸಣ್ಣ ಉಳಿತಾಯ ಯೋಜನೆಗಳ ನಿಯಮದಲ್ಲಿ ಸಕಾರಾತ್ಮಕ ಬದಲಾವಣೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (53,008 ರುಪಾಯಿ)
  • ದುಬೈ: 2,222.50 ಡಿರಾಮ್ (50,373 ರುಪಾಯಿ)
  • ಅಮೆರಿಕ: 610 ಡಾಲರ್ (50,781 ರುಪಾಯಿ)
  • ಸಿಂಗಾಪುರ: 823 ಸಿಂಗಾಪುರ್ ಡಾಲರ್ (51,011 ರುಪಾಯಿ)
  • ಕತಾರ್: 2,285 ಕತಾರಿ ರಿಯಾಲ್ (52,196 ರೂ)
  • ಸೌದಿ ಅರೇಬಿಯಾ: 2,290 ಸೌದಿ ರಿಯಾಲ್ (50,833 ರುಪಾಯಿ)
  • ಓಮನ್: 242 ಒಮಾನಿ ರಿಯಾಲ್ (52,330 ರುಪಾಯಿ)
  • ಕುವೇತ್: 191 ಕುವೇತಿ ದಿನಾರ್ (51,576 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,525 ರೂ
  • ಚೆನ್ನೈ: 7,900 ರೂ
  • ಮುಂಬೈ: 7,600 ರೂ
  • ದೆಹಲಿ: 7,600 ರೂ
  • ಕೋಲ್ಕತಾ: 7,600 ರೂ
  • ಕೇರಳ: 7,900 ರೂ
  • ಅಹ್ಮದಾಬಾದ್: 7,600 ರೂ
  • ಜೈಪುರ್: 7,600 ರೂ
  • ಲಕ್ನೋ: 7,600 ರೂ
  • ಭುವನೇಶ್ವರ್: 7,900 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ