ಬೆಂಗಳೂರು, ನವೆಂಬರ್ 24: ಚಿನ್ನದ ಬೆಲೆಗಳು (Gold and silver Rates) ಹಲವು ದೇಶಗಳಲ್ಲಿ ಕಡಿಮೆ ಆಗಿವೆ. ಭಾರತದಲ್ಲಿ ಎರಡು ದಿನದಿಂದ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಇವತ್ತು ಭಾರತದಲ್ಲೂ ಚಿನ್ನದ ಬೆಲೆ ತಗ್ಗುವ ಸಾಧ್ಯತೆ ಇದೆ. ನಿನ್ನೆ ಇಳಿಕೆಯಾಗಿದ್ದ ಬೆಳ್ಳಿ ಬೆಲೆ ಇಂದು ಅಲ್ಪ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಗ್ರಾಮ್ಗೆ 4 ಪೈಸೆಯಷ್ಟು ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,850 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,620 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 56,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,500 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: RBI: 2,000 ರೂ ನೋಟು ಇನ್ನೂ ಇದೆಯಾ? ಆರ್ಬಿಐ ಕಚೇರಿಗೆ ಹೋಗದೇ ಹಣ ವಿನಿಮಯ ಸಾಧ್ಯ; ಇಲ್ಲಿದೆ ಮಾರ್ಗ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ