AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 26th November: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ

Bullion Market 2024 November 26th: ಚಿನ್ನದ ಬೆಲೆ ಮಂಗಳವಾರ ಗ್ರಾಮ್​ಗೆ 120 ರೂನಷ್ಟು ಕಡಿಮೆ ಆಗಿದೆ. ನಿನ್ನೆ ಮತ್ತು ಇವತ್ತು ಸೇರಿಸಿದರೆ ಚಿನ್ನದ ಬೆಲೆ ಗ್ರಾಮ್​ಗೆ 220 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ ಮಂಗಳವಾರ 2 ರೂನಷ್ಟು ಇಳಿದಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 89.50 ರೂಗೆ ಇಳಿದಿದೆ. ಚೆನ್ನೈನಲ್ಲಿ 100 ರೂ ಒಳಗೆ ಇಳಿದಿದೆ.

Gold Silver Price on 26th November: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 26, 2024 | 11:00 AM

Share

ಬೆಂಗಳೂರು, ನವೆಂಬರ್ 26: ಚಿನ್ನ ಮತ್ತು ಬೆಳ್ಳಿ ಬೆಲೆ ಇವತ್ತು ಮಂಗಳವಾರ ಭರ್ಜರಿಯಾಗಿ ಇಳಿಕೆ ಕಂಡಿವೆ. ಚಿನ್ನದ ಬೆಲೆ ಸತತ ಎರಡನೇ ದಿನ ಕಡಿಮೆ ಆಗಿದೆ. ಇಂದು ಸೋಮವಾರ ಹಳದಿಲೋಹದ ಬೆಲೆ ಗ್ರಾಮ್​ಗೆ ಬರೋಬ್ಬರಿ 120 ರೂನಷ್ಟು ಕುಸಿತ ಆಗಿದೆ. ಆಭರಣ ಚಿನ್ನದ ಬೆಲೆ 7,100 ರೂ ಮಟ್ಟಕ್ಕಿಂತ ಕೆಳಗಿಳಿದಿದೆ. 18 ಕ್ಯಾರಟ್ ಚಿನ್ನದ ಬೆಲೆ 5,800 ರೂ ಮಟ್ಟಕ್ಕಿಂತ ಕೆಳಗಿಳಿದಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಗ್ರಾಮ್​ಗೆ ಬರೋಬ್ಬರಿ 2 ರೂನಷ್ಟು ಇಳಿಕೆ ಆಗಿದೆ. 90 ರೂಗಿಂತ ಕಡಿಮೆಗೆ ಬಂದಿದೆ. ಚೆನ್ನೈನಲ್ಲೂ ಬೆಳ್ಳಿ ಬೆಲೆ ಹಲವು ದಿನಗಳ ಬಳಿಕ 100 ರೂಗಿಂತ ಗಡಿಯೊಳಗೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 70,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,240 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,950 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 70,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,950 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 26ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,240 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,930 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 89.50 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,240 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 89.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 70,800 ರೂ
  • ಚೆನ್ನೈ: 70,800 ರೂ
  • ಮುಂಬೈ: 70,800 ರೂ
  • ದೆಹಲಿ: 70,950 ರೂ
  • ಕೋಲ್ಕತಾ: 70,800 ರೂ
  • ಕೇರಳ: 70,800 ರೂ
  • ಅಹ್ಮದಾಬಾದ್: 70,850 ರೂ
  • ಜೈಪುರ್: 70,950 ರೂ
  • ಲಕ್ನೋ: 70,950 ರೂ
  • ಭುವನೇಶ್ವರ್: 70,800 ರೂ

ಇದನ್ನೂ ಓದಿ: Petrol Diesel Price on November 26: ಆಂಧ್ರ, ಅಸ್ಸಾಂನಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (68,840 ರುಪಾಯಿ)
  • ದುಬೈ: 2,965 ಡಿರಾಮ್ (68,040 ರುಪಾಯಿ)
  • ಅಮೆರಿಕ: 780 ಡಾಲರ್ (65,710 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (67,950 ರುಪಾಯಿ)
  • ಕತಾರ್: 2,985 ಕತಾರಿ ರಿಯಾಲ್ (68,980 ರೂ)
  • ಸೌದಿ ಅರೇಬಿಯಾ: 3,020 ಸೌದಿ ರಿಯಾಲ್ (67,750 ರುಪಾಯಿ)
  • ಓಮನ್: 314.50 ಒಮಾನಿ ರಿಯಾಲ್ (68,810 ರುಪಾಯಿ)
  • ಕುವೇತ್: 241.20 ಕುವೇತಿ ದಿನಾರ್ (66,030 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,950 ರೂ
  • ಚೆನ್ನೈ: 9,800 ರೂ
  • ಮುಂಬೈ: 8,950 ರೂ
  • ದೆಹಲಿ: 8,950 ರೂ
  • ಕೋಲ್ಕತಾ: 8,950 ರೂ
  • ಕೇರಳ: 9,800 ರೂ
  • ಅಹ್ಮದಾಬಾದ್: 8,950 ರೂ
  • ಜೈಪುರ್: 8,950 ರೂ
  • ಲಕ್ನೋ: 8,950 ರೂ
  • ಭುವನೇಶ್ವರ್: 9,800 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ