AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 29 November: ವಿದೇಶಗಳಲ್ಲಿ ಚಿನ್ನದ ಬೆಲೆ ಹೆಚ್ಚಳ; ಬೆಂಗಳೂರಲ್ಲಿ ಬೆಳ್ಳಿ ದುಬಾರಿ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2023, November 29th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,560 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 78.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,350 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,800 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 29 November: ವಿದೇಶಗಳಲ್ಲಿ ಚಿನ್ನದ ಬೆಲೆ ಹೆಚ್ಚಳ; ಬೆಂಗಳೂರಲ್ಲಿ ಬೆಳ್ಳಿ ದುಬಾರಿ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
TV9 Web
| Edited By: |

Updated on: Nov 29, 2023 | 5:10 AM

Share

ಬೆಂಗಳೂರು, ನವೆಂಬರ್ 29: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇಂದು ಏರಿಕೆ ಕಾಣದಿದ್ದರೂ ಅಮೆರಿಕ ಸೇರಿದಂತೆ ಕೆಲ ದೇಶಗಳಲ್ಲಿ ಬೆಲೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ತುಸು ಏರಿಕೆ ಆಗಿದೆ. ಇವತ್ತು ಚಿನ್ನ ಮತ್ತು ಬೆಳ್ಳಿ ಎರಡೂ ಬೆಲೆಗಳು ಏರಿಕೆ ಆಗುವ ಸಾಧ್ಯತೆ ಹೆಚ್ಚಿದೆ. ಅಮೆರಿಕದ ಪರಿಸ್ಥಿತಿಯು ಅಂತಾರಾಷ್ಟ್ರೀಯ ಚಿನ್ನ ಮಾರುಕಟ್ಟೆಗಳ ಮೇಲೆ ಪ್ರಭಾವ ಬೀರುತ್ತಿದೆ. ಹೂಡಿಕೆದಾರರು ಮುನ್ನೆಚ್ಚರಿಕೆಯಾಗಿ ಚಿನ್ನದ ಮೇಲೆ ಹೂಡಿಕೆ ಹೆಚ್ಚಿಸಿದ್ದಾರೆ. ಅಮೆರಿಕದಲ್ಲಿ ಬಡ್ಡಿದರ ಕಡಿಮೆ ಆದರೆ ಚಿನ್ನದ ಬೆಲೆ ಗಣನೀಯವಾಗಿ ಏರತೊಡಗಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,560 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,850 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,800 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 29ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,560 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 785 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,560 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 780 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,350 ರೂ
  • ಚೆನ್ನೈ: 57,800 ರೂ
  • ಮುಂಬೈ: 57,350 ರೂ
  • ದೆಹಲಿ: 57,500 ರೂ
  • ಕೋಲ್ಕತಾ: 57,350 ರೂ
  • ಕೇರಳ: 57,350 ರೂ
  • ಅಹ್ಮದಾಬಾದ್: 57,400 ರೂ
  • ಜೈಪುರ್: 57,500 ರೂ
  • ಲಕ್ನೋ: 57,500 ರೂ
  • ಭುವನೇಶ್ವರ್: 57,350 ರೂ

ಇದನ್ನೂ ಓದಿ: ಜೀವ ಪ್ರಮಾಣಪತ್ರ ಸಲ್ಲಿಸಲು ಎರಡೇ ದಿನ ಬಾಕಿ; ನ. 30ಕ್ಕೆ ಕೊಡದಿದ್ದರೆ ಪಿಂಚಣಿ ಸಿಗೋದಿಲ್ವಾ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (53,155 ರುಪಾಯಿ)
  • ದುಬೈ: 2,260 ಡಿರಾಮ್ (51,287 ರುಪಾಯಿ)
  • ಅಮೆರಿಕ: 620 ಡಾಲರ್ (51,664 ರುಪಾಯಿ)
  • ಸಿಂಗಾಪುರ: 837 ಸಿಂಗಾಪುರ್ ಡಾಲರ್ (52,190 ರುಪಾಯಿ)
  • ಕತಾರ್: 2,325 ಕತಾರಿ ರಿಯಾಲ್ (53,148 ರೂ)
  • ಸೌದಿ ಅರೇಬಿಯಾ: 2,330 ಸೌದಿ ರಿಯಾಲ್ (51,766 ರುಪಾಯಿ)
  • ಓಮನ್: 246 ಒಮಾನಿ ರಿಯಾಲ್ (53,312 ರುಪಾಯಿ)
  • ಕುವೇತ್: 194 ಕುವೇತಿ ದಿನಾರ್ (52,410 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,625 ರೂ
  • ಚೆನ್ನೈ: 8,150 ರೂ
  • ಮುಂಬೈ: 7,850 ರೂ
  • ದೆಹಲಿ: 7,850 ರೂ
  • ಕೋಲ್ಕತಾ: 7,850 ರೂ
  • ಕೇರಳ: 8,150 ರೂ
  • ಅಹ್ಮದಾಬಾದ್: 7,850 ರೂ
  • ಜೈಪುರ್: 7,850 ರೂ
  • ಲಕ್ನೋ: 7,850 ರೂ
  • ಭುವನೇಶ್ವರ್: 8,150 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!