ಬೆಂಗಳೂರು, ನವೆಂಬರ್ 29: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇಂದು ಏರಿಕೆ ಕಾಣದಿದ್ದರೂ ಅಮೆರಿಕ ಸೇರಿದಂತೆ ಕೆಲ ದೇಶಗಳಲ್ಲಿ ಬೆಲೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ತುಸು ಏರಿಕೆ ಆಗಿದೆ. ಇವತ್ತು ಚಿನ್ನ ಮತ್ತು ಬೆಳ್ಳಿ ಎರಡೂ ಬೆಲೆಗಳು ಏರಿಕೆ ಆಗುವ ಸಾಧ್ಯತೆ ಹೆಚ್ಚಿದೆ. ಅಮೆರಿಕದ ಪರಿಸ್ಥಿತಿಯು ಅಂತಾರಾಷ್ಟ್ರೀಯ ಚಿನ್ನ ಮಾರುಕಟ್ಟೆಗಳ ಮೇಲೆ ಪ್ರಭಾವ ಬೀರುತ್ತಿದೆ. ಹೂಡಿಕೆದಾರರು ಮುನ್ನೆಚ್ಚರಿಕೆಯಾಗಿ ಚಿನ್ನದ ಮೇಲೆ ಹೂಡಿಕೆ ಹೆಚ್ಚಿಸಿದ್ದಾರೆ. ಅಮೆರಿಕದಲ್ಲಿ ಬಡ್ಡಿದರ ಕಡಿಮೆ ಆದರೆ ಚಿನ್ನದ ಬೆಲೆ ಗಣನೀಯವಾಗಿ ಏರತೊಡಗಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,560 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,850 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,800 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಜೀವ ಪ್ರಮಾಣಪತ್ರ ಸಲ್ಲಿಸಲು ಎರಡೇ ದಿನ ಬಾಕಿ; ನ. 30ಕ್ಕೆ ಕೊಡದಿದ್ದರೆ ಪಿಂಚಣಿ ಸಿಗೋದಿಲ್ವಾ?
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ