AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 29th November: ಚಿನ್ನದ ಬೆಲೆ ಇಂದು ಹೆಚ್ಚಳ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 November 29th: ಈ ವಾರ ಚಿನ್ನದ ಬೆಲೆಯ ಹೊಯ್ದಾಟ ಮುಂದುವರಿದಿದೆ. ಚಿನ್ನದ ಬೆಲೆ ಇವತ್ತು ಗ್ರಾಮ್​ಗೆ 60-70 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯೂ ಎರಡು ರೂಗಳಷ್ಟು ದೊಡ್ಡ ಪ್ರಮಾಣದಲ್ಲಿ ಏರಿಕೆ ಕಂಡಿದೆ.

Gold Silver Price on 29th November: ಚಿನ್ನದ ಬೆಲೆ ಇಂದು ಹೆಚ್ಚಳ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 29, 2024 | 10:44 AM

Share

ಬೆಂಗಳೂರು, ನವೆಂಬರ್ 29: ಚಿನ್ನದ ಬೆಲೆ ಈ ವಾರ ಸಾಕಷ್ಟು ಏರಿಳಿತಗಳೊಂದಿಗೆ ಹೊಯ್ದಾಡುವುದು ಮುಂದುವರಿದಿದೆ. ಮೊನ್ನೆ ಭರ್ಜರಿ ಹೆಚ್ಚಳ ಕಂಡು, ನಿನ್ನೆ ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇಂದು ಶುಕ್ರವಾರ ಮತ್ತೆ ಏರಿಕೆಯಾಗಿದೆ. ಬೆಳ್ಳಿ ಬೆಲೆಯೂ ಕೂಡ ಈ ವಾರ ಮೊದಲ ಬಾರಿಗೆ ಏರಿಕೆ ಆಗಿರುವುದು ವಿಶೇಷ. ಚಿನ್ನದ ಬೆಲೆ ಇಂದು 7,100 ರೂ ಗಡಿ ದಾಟಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 7,811 ರೂ ಆಗಿದೆ. ಬೆಳ್ಳಿ ಬೆಲೆ ಚೆನ್ನೈ ಮೊದಲಾದ ಕೆಲವೆಡೆ ಹಲವು ದಿನಗಳ ಬಳಿಕ 100 ರೂ ಗಡಿ ಮುಟ್ಟಿದೆ. ಬೆಂಗಳೂರಿನಲ್ಲಿ ಬೆಲೆ 91.50 ರೂಗೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 70,930 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,950 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 70,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,950 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 29ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,110 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,580 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 91.50 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 91.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 71,600 ರೂ
  • ಚೆನ್ನೈ: 71,600 ರೂ
  • ಮುಂಬೈ: 71,600 ರೂ
  • ದೆಹಲಿ: 71,750 ರೂ
  • ಕೋಲ್ಕತಾ: 71,600 ರೂ
  • ಕೇರಳ: 71,600 ರೂ
  • ಅಹ್ಮದಾಬಾದ್: 71,650 ರೂ
  • ಜೈಪುರ್: 71,750 ರೂ
  • ಲಕ್ನೋ: 71,750 ರೂ
  • ಭುವನೇಶ್ವರ್: 71,600 ರೂ

ಇದನ್ನೂ ಓದಿ: Petrol Diesel Price on November 29: ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (69,080 ರುಪಾಯಿ)
  • ದುಬೈ: 2,967.50 ಡಿರಾಮ್ (68,360 ರುಪಾಯಿ)
  • ಅಮೆರಿಕ: 780 ಡಾಲರ್ (65,910 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,500 ರುಪಾಯಿ)
  • ಕತಾರ್: 2,990 ಕತಾರಿ ರಿಯಾಲ್ (69,310 ರೂ)
  • ಸೌದಿ ಅರೇಬಿಯಾ: 3,030 ಸೌದಿ ರಿಯಾಲ್ (68,160 ರುಪಾಯಿ)
  • ಓಮನ್: 315.50 ಒಮಾನಿ ರಿಯಾಲ್ (69,240 ರುಪಾಯಿ)
  • ಕುವೇತ್: 242 ಕುವೇತಿ ದಿನಾರ್ (66,490 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,150 ರೂ
  • ಚೆನ್ನೈ: 10,000 ರೂ
  • ಮುಂಬೈ: 9,150 ರೂ
  • ದೆಹಲಿ: 9,150 ರೂ
  • ಕೋಲ್ಕತಾ: 9,150 ರೂ
  • ಕೇರಳ: 10,000 ರೂ
  • ಅಹ್ಮದಾಬಾದ್: 9,150 ರೂ
  • ಜೈಪುರ್: 9,150 ರೂ
  • ಲಕ್ನೋ: 9,150 ರೂ
  • ಭುವನೇಶ್ವರ್: 10,000 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ