ಬೆಂಗಳೂರು, ನವೆಂಬರ್ 2: ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and silver Rates) ಇಳಿಕೆ ಮುಂದುವರಿದಿದೆ. ಭಾರತದಲ್ಲಿ ಎಲ್ಲೆಡೆ ಚಿನ್ನದ ಬೆಲೆ ಇಳಿದಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಏರಿದೆ, ಇನ್ನೂ ಕೆಲವೆಡೆ ಯಥಾಸ್ಥಿತಿ ಇದೆ. ಬೆಳ್ಳಿ ಬೆಲೆಯೂ ಭಾರತದಲ್ಲಿ ಕಡಿಮೆ ಆಗಿದೆ. ಕಳೆದ ಮೂರು ವಾರಗಳಿಂದ ಸತತವಾಗಿ ಏರಿಕೆ ಆಗಿದ್ದ ಈ ಎರಡೂ ಲೋಹಗಳ ಬೆಲೆ ಈ ವಾರ ಇಳಿಕೆಯ ಹಾದಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,400 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,530 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,410 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 56,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,400 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Bank Holidays: ನವೆಂಬರ್ ತಿಂಗಳಲ್ಲಿ ಭಾರತದಲ್ಲಿ ಬ್ಯಾಂಕುಗಳಿಗೆ 15 ದಿನ ರಜೆ; ಕರ್ನಾಟಕದಲ್ಲಿ ಎಷ್ಟು?; ಇಲ್ಲಿದೆ ಪಟ್ಟಿ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ