AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 30 November: ಚಿನ್ನದ ಬೆಲೆ ಭರ್ಜರಿ ಹೆಚ್ಚಳ; ಗ್ರಾಮ್​ಗೆ ಬರೋಬ್ಬರಿ 75ರೂನಷ್ಟು ಏರಿಕೆ; ಬೆಳ್ಳಿಯೂ ದುಬಾರಿ

Bullion Market 2023, November 30th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,380 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 79.20 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 58,100 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,800 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 30 November: ಚಿನ್ನದ ಬೆಲೆ ಭರ್ಜರಿ ಹೆಚ್ಚಳ; ಗ್ರಾಮ್​ಗೆ ಬರೋಬ್ಬರಿ 75ರೂನಷ್ಟು ಏರಿಕೆ; ಬೆಳ್ಳಿಯೂ ದುಬಾರಿ
ಚಿನ್ನ
TV9 Web
| Edited By: |

Updated on: Nov 30, 2023 | 5:04 AM

Share

ಬೆಂಗಳೂರು, ನವೆಂಬರ್ 30: ನಿರೀಕ್ಷಿಸಿದಂತೆ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಭರ್ಜರಿ ಏರಿಕೆ ಕಂಡಿದೆ. ದೇಶ ವಿದೇಶಗಳಲ್ಲಿ ಇವೆರಡೂ ಲೋಹಗಳಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ ಹೆಚ್ಚಿದೆ. ಹೂಡಿಕೆದಾರರು ಡಾಲರ್ ಬಿಟ್ಟು ಬೇರೆ ಕಡೆ ಹೂಡಿಕೆಗೆ ಮುಂದಾಗಿದ್ದಾರೆ. ಅಮೆರಿಕದ ಆರ್ಥಿಕತೆ ಚಿಗುರುತ್ತಿರುವ ಮತ್ತು ಅಲ್ಲಿನ ಬಡ್ಡಿದರ ಕಡಿಮೆಗೊಳ್ಳುತ್ತಿರುವ ಸುಳಿವು ಸಿಕ್ಕಿರುವುದು ಈ ಬೆಲೆ ಏರಿಕೆಗೆ ಕಾರಣವಾಗಿರಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,920 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,800 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 30ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 792 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 780 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,100 ರೂ
  • ಚೆನ್ನೈ: 58,700 ರೂ
  • ಮುಂಬೈ: 58,100 ರೂ
  • ದೆಹಲಿ: 58,250 ರೂ
  • ಕೋಲ್ಕತಾ: 58,100 ರೂ
  • ಕೇರಳ: 58,100 ರೂ
  • ಅಹ್ಮದಾಬಾದ್: 58,150 ರೂ
  • ಜೈಪುರ್: 58,250 ರೂ
  • ಲಕ್ನೋ: 58,250 ರೂ
  • ಭುವನೇಶ್ವರ್: 58,100 ರೂ

ಇದನ್ನೂ ಓದಿ: 81 ಕೋಟಿ ಬಡವರಿಗೆ ಉಚಿತ ಪಡಿತರ ವಿತರಣೆ; 5 ವರ್ಷ ಯೋಜನೆ ವಿಸ್ತರಣೆಗೆ ಕೇಂದ್ರ ಸಂಪುಟ ಅನುಮೋದನೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (53,155 ರುಪಾಯಿ)
  • ದುಬೈ: 2,260 ಡಿರಾಮ್ (51,287 ರುಪಾಯಿ)
  • ಅಮೆರಿಕ: 620 ಡಾಲರ್ (51,664 ರುಪಾಯಿ)
  • ಸಿಂಗಾಪುರ: 837 ಸಿಂಗಾಪುರ್ ಡಾಲರ್ (52,190 ರುಪಾಯಿ)
  • ಕತಾರ್: 2,325 ಕತಾರಿ ರಿಯಾಲ್ (53,148 ರೂ)
  • ಸೌದಿ ಅರೇಬಿಯಾ: 2,330 ಸೌದಿ ರಿಯಾಲ್ (51,766 ರುಪಾಯಿ)
  • ಓಮನ್: 246 ಒಮಾನಿ ರಿಯಾಲ್ (53,312 ರುಪಾಯಿ)
  • ಕುವೇತ್: 194 ಕುವೇತಿ ದಿನಾರ್ (52,410 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,625 ರೂ
  • ಚೆನ್ನೈ: 8,150 ರೂ
  • ಮುಂಬೈ: 7,850 ರೂ
  • ದೆಹಲಿ: 7,850 ರೂ
  • ಕೋಲ್ಕತಾ: 7,850 ರೂ
  • ಕೇರಳ: 8,150 ರೂ
  • ಅಹ್ಮದಾಬಾದ್: 7,850 ರೂ
  • ಜೈಪುರ್: 7,850 ರೂ
  • ಲಕ್ನೋ: 7,850 ರೂ
  • ಭುವನೇಶ್ವರ್: 8,150 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ