AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 3rd November: ಚಿನ್ನದ ಬೆಲೆ ಮತ್ತೆ ಇಳಿಕೆ; ಅಪರಂಜಿ ಚಿನ್ನದ ಬೆಲೆ 8,040 ರೂ

Bullion Market 2024 November 3rd: ಚಿನ್ನದ ಬೆಲೆ ವಾರಾಂತ್ಯದಲ್ಲಿ ಗ್ರಾಮ್​ಗೆ 15 ರೂನಷ್ಟು ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ 7,370 ರೂಗೆ ಇಳಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ 8,040 ರೂ ಆಗಿದೆ. 18 ಕ್ಯಾರಟ್ ಚಿನ್ನದ ಬೆಲೆ 6,030 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 97 ರೂನಲ್ಲಿದ್ದರೆ, ಚೆನ್ನೈ ಇತ್ಯಾದಿಯೆಡೆ 106 ರೂ ಇದೆ.

Gold Silver Price on 3rd November: ಚಿನ್ನದ ಬೆಲೆ ಮತ್ತೆ ಇಳಿಕೆ; ಅಪರಂಜಿ ಚಿನ್ನದ ಬೆಲೆ 8,040 ರೂ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 03, 2024 | 10:09 AM

Share

ಬೆಂಗಳೂರು, ನವೆಂಬರ್ 3: ಚಿನ್ನದ ಬೆಲೆ ವಾರಾಂತ್ಯದಲ್ಲಿ ಅಲ್ಪ ಇಳಿಕೆ ಆಗಿದೆ. 7,385 ರೂನಷ್ಟಿದ್ದ ಚಿನ್ನದ ಬೆಲೆ 7,370 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 8,056 ರೂನಿಂದ 8,040 ರೂ ಇಳಿದಿದೆ. ಬೆಳ್ಳಿ ಬೆಲೆ 97 ರೂ ಮತ್ತು 106 ರೂನಲ್ಲಿ ಮುಂದುವರಿದಿದೆ. ಶುಕ್ರವಾರದಂದು ಚಿನ್ನದ ಬೆಲೆ ಬರೋಬ್ಬರಿ 70 ರೂನಷ್ಟು ಇಳಿದಿತ್ತು. ಈಗ 13 ರೂನಷ್ಟು ಬೆಲೆ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 73,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 80,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 73,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,700 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 3ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,400 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,300 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 97 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,400 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 97 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 73,700 ರೂ
  • ಚೆನ್ನೈ: 73,700 ರೂ
  • ಮುಂಬೈ: 73,700 ರೂ
  • ದೆಹಲಿ: 73,800 ರೂ
  • ಕೋಲ್ಕತಾ: 73,700 ರೂ
  • ಕೇರಳ: 73,700 ರೂ
  • ಅಹ್ಮದಾಬಾದ್: 73,750 ರೂ
  • ಜೈಪುರ್: 73,800 ರೂ
  • ಲಕ್ನೋ: 73,800 ರೂ
  • ಭುವನೇಶ್ವರ್: 73,700 ರೂ

ಇದನ್ನೂ ಓದಿ: Petrol Diesel Price on November 03: ಮಹಾರಾಷ್ಟ್ರ, ಬಿಹಾರದಲ್ಲಿ ಪೆಟ್ರೋಲ್ ಬೆಲೆ ಏರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,680 ರಿಂಗಿಟ್ (70,680 ರುಪಾಯಿ)
  • ದುಬೈ: 3,070 ಡಿರಾಮ್ (70,280 ರುಪಾಯಿ)
  • ಅಮೆರಿಕ: 820 ಡಾಲರ್ (68,950 ರುಪಾಯಿ)
  • ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (70,320 ರುಪಾಯಿ)
  • ಕತಾರ್: 3,080 ಕತಾರಿ ರಿಯಾಲ್ (71,040 ರೂ)
  • ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,060 ರುಪಾಯಿ)
  • ಓಮನ್: 324.50 ಒಮಾನಿ ರಿಯಾಲ್ (70,870 ರುಪಾಯಿ)
  • ಕುವೇತ್: 248.30 ಕುವೇತಿ ದಿನಾರ್ (68,060 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,700 ರೂ
  • ಚೆನ್ನೈ: 10,600 ರೂ
  • ಮುಂಬೈ: 9,700 ರೂ
  • ದೆಹಲಿ: 9,700 ರೂ
  • ಕೋಲ್ಕತಾ: 9,700 ರೂ
  • ಕೇರಳ: 10,600 ರೂ
  • ಅಹ್ಮದಾಬಾದ್: 9,700 ರೂ
  • ಜೈಪುರ್: 9,700 ರೂ
  • ಲಕ್ನೋ: 9,700 ರೂ
  • ಭುವನೇಶ್ವರ್: 10,600 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ದಾವಣಗೆರೆ: ಹಳ್ಳ ಹಿಡಿದ 'ಎಸ್ಐಆರ್' ಪ್ರಕ್ರಿಯೆ
ದಾವಣಗೆರೆ: ಹಳ್ಳ ಹಿಡಿದ 'ಎಸ್ಐಆರ್' ಪ್ರಕ್ರಿಯೆ
ರಾಮಮಂದಿರ ದೇಣಿಗೆ ಕಳ್ಳತನ; RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ರಾಮಮಂದಿರ ದೇಣಿಗೆ ಕಳ್ಳತನ; RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ಪ್ರಧಾನಿ ಮೋದಿಯಿಂದ ಜೋಧ್‌ಪುರ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟನೆ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್​ ಜೋಶಿ
ನೆಲಮಂಗಲ: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು SIR ಪತ್ರ ವಿತರಣೆ
ನೆಲಮಂಗಲ: ಮನೆ ಮನೆಗೆ ಹೋಗುವ ಬದಲು ಮಸೀದಿಯಲ್ಲೇ ಕುಳಿತು SIR ಪತ್ರ ವಿತರಣೆ
ಬತ್ತಿದ್ದ ಕೃಷ್ಣಾ ನದಿಗೆ ಜೀವ ಕಳೆ, 15 ಸಾವಿರ ಕ್ಯೂಸೆಕ್ ಒಳ ಹರಿವು
ಬತ್ತಿದ್ದ ಕೃಷ್ಣಾ ನದಿಗೆ ಜೀವ ಕಳೆ, 15 ಸಾವಿರ ಕ್ಯೂಸೆಕ್ ಒಳ ಹರಿವು
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
SIR ವಿವಾದ: ಸರ್ಕಾರದ ವಿರುದ್ಧ ಜಂಟಿ ಸಮರಕ್ಕೆ ಬಿಜೆಪಿ, ಜೆಡಿಎಸ್‌ ಸಿದ್ಧತೆ
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಟ್ರಾಫಿಕ್ ಸಿಗ್ನಲ್​ನಲ್ಲಿ ನಿಂತಿದ್ದ ಎಸಿ ಬಸ್​ಗೆ ಮತ್ತೊಂದು ಬಸ್ ಡಿಕ್ಕಿ!
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ
ಸರ್ಕಾರಿ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ: ಟಿವಿ9 ವರದಿ ಬಳಿಕ ಆರೋಪಿಗಳ ಬಂಧನ