Gold Silver Price on 4th November: ಚಿನ್ನದ ಬೆಲೆ ಸೋಮವಾರ ಅಲ್ಪ ಇಳಿಕೆ; ಬೆಳ್ಳಿ ಬೆಲೆ ಯಥಾಸ್ಥಿತಿ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 November 4th: ಚಿನ್ನದ ಬೆಲೆ ಮತ್ತೆ ಕಡಿಮೆ ಆಗಿದೆ. ಸೋಮವಾರ ಈ ಹಳದಿ ಲೋಹದ ಬೆಲೆ ಗ್ರಾಮ್​ಗೆ ಒಂದು ರೂನಷ್ಟು ಅಲ್ಪ ಇಳಿಕೆ ಕಂಡಿದೆ. 22 ಕ್ಯಾರಟ್​ನ ಆಭರಣ ಚಿನ್ನದ ಬೆಲೆ 7,370 ರೂ ಇದ್ದದ್ದು 7,369 ರೂಗೆ ಇಳಿದಿದೆ. ಬೆಳ್ಳಿ ಬೆಲೆ 97 ರೂ ಮತ್ತು 106 ರೂನಲ್ಲಿ ಮುಂದುವರಿದಿದೆ.

Gold Silver Price on 4th November: ಚಿನ್ನದ ಬೆಲೆ ಸೋಮವಾರ ಅಲ್ಪ ಇಳಿಕೆ; ಬೆಳ್ಳಿ ಬೆಲೆ ಯಥಾಸ್ಥಿತಿ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: Nov 04, 2024 | 10:08 AM

ಬೆಂಗಳೂರು, ನವೆಂಬರ್ 4: ಚಿನ್ನದ ಬೆಲೆ ಇಂದು ಸೋಮವಾರವೂ ಅಲ್ಪ ಇಳಿಕೆ ಆಗಿದೆ. ಶುಕ್ರವಾರದಿಂದ ಮೂರು ಬಾರಿ ಚಿನ್ನದ ಬೆಲೆ ಇಳಿದಿದೆ. ಹತ್ತಿರ ಹತ್ತಿರ ಗ್ರಾಮ್​ಗೆ 90 ರೂನಷ್ಟು ಕಡಿಮೆ ಆಗಿದೆ. ಇಂದು ಸೋಮವಾರ 1 ರೂ ಮಾತ್ರವೇ ಇಳಿಕೆ ಆಗಿದೆ. ಬೆಳ್ಳಿ ಬೆಲೆಯ ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 73,690 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 80,390 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 73,690 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,700 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 4ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,690 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,390 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,290 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 97 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,690 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,390 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 97 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 73,690 ರೂ
  • ಚೆನ್ನೈ: 73,690 ರೂ
  • ಮುಂಬೈ: 73,690 ರೂ
  • ದೆಹಲಿ: 73,790 ರೂ
  • ಕೋಲ್ಕತಾ: 73,690 ರೂ
  • ಕೇರಳ: 73,690 ರೂ
  • ಅಹ್ಮದಾಬಾದ್: 73,740 ರೂ
  • ಜೈಪುರ್: 73,790 ರೂ
  • ಲಕ್ನೋ: 73,790 ರೂ
  • ಭುವನೇಶ್ವರ್: 73,690 ರೂ

ಇದನ್ನೂ ಓದಿ: Petrol Diesel Price on November 04: ಕಚ್ಚಾತೈಲ ಕೊಂಚ ದುಬಾರಿ, ಭಾರತದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,680 ರಿಂಗಿಟ್ (70,910 ರುಪಾಯಿ)
  • ದುಬೈ: 3,070 ಡಿರಾಮ್ (70,270 ರುಪಾಯಿ)
  • ಅಮೆರಿಕ: 820 ಡಾಲರ್ (68,940 ರುಪಾಯಿ)
  • ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (70,850 ರುಪಾಯಿ)
  • ಕತಾರ್: 3,080 ಕತಾರಿ ರಿಯಾಲ್ (71,030 ರೂ)
  • ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,050 ರುಪಾಯಿ)
  • ಓಮನ್: 324.50 ಒಮಾನಿ ರಿಯಾಲ್ (70,860 ರುಪಾಯಿ)
  • ಕುವೇತ್: 248.30 ಕುವೇತಿ ದಿನಾರ್ (68,100 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,700 ರೂ
  • ಚೆನ್ನೈ: 10,600 ರೂ
  • ಮುಂಬೈ: 9,700 ರೂ
  • ದೆಹಲಿ: 9,700 ರೂ
  • ಕೋಲ್ಕತಾ: 9,700 ರೂ
  • ಕೇರಳ: 10,600 ರೂ
  • ಅಹ್ಮದಾಬಾದ್: 9,700 ರೂ
  • ಜೈಪುರ್: 9,700 ರೂ
  • ಲಕ್ನೋ: 9,700 ರೂ
  • ಭುವನೇಶ್ವರ್: 10,600 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us