ಬೆಂಗಳೂರು, ನವೆಂಬರ್ 6: ಕಳೆದ ಹಲವು ವಾರಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ (Gold and silver Rates) ಏರಿಳಿತಗಳು ಸಾಕಷ್ಟಾಗಿದ್ದರೂ ಅಷ್ಟೇನೂ ದೊಡ್ಡ ವ್ಯತ್ಯಾಸಗಳಾಗಿಲ್ಲ. ಚಿನ್ನದ ಬೆಲೆ ನಿರೀಕ್ಷಿತ ರೀತಿಯಲ್ಲಿ ಏರಿಲ್ಲ. ಇದು ಆಭರಣ ಪ್ರಿಯರಿಗೆ ಖುಷಿಯ ಸುದ್ದಿ. ಆದರೆ, ಗೋಲ್ಡ್ ಬಾಂಡ್ ಸ್ಕೀಮ್ಗಳಲ್ಲಿ ಹೂಡಿಕೆ ಮಾಡಿದವರಿಗೆ ತುಸು ನಿರಾಸೆ ತರುತ್ತಿರಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,500 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 56,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,400 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: PPF: ಪಬ್ಲಿಕ್ ಪ್ರಾವಿಡೆಂಟ್ ಫಂಡ್ನಲ್ಲಿ ಹೂಡಿಕೆ ಮಾಡಿ ಕೋಟಿ ಸಂಪಾದನೆ ಮಾಡುವುದು ಹೇಗೆ?
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 5:09 am, Mon, 6 November 23