Gold Silver Price on 6th November: ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ

Bullion Market 2024 November 6th: ಆಭರಣ ಚಿನ್ನದ ಬೆಲೆ ಬುಧವಾರ 7,355 ರೂನಿಂದ 7,354 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 8,023 ರೂಗೆ ಇಳಿದಿದೆ. 18 ಕ್ಯಾರಟ್ ಚಿನ್ನದ ಬೆಲೆ 6,018 ರೂನಿಂದ 6,017 ರೂಗೆ ಇಳಿದಿದೆ.

Gold Silver Price on 6th November: ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ
ಚಿನ್ನ

Updated on: Nov 06, 2024 | 10:03 AM

ಬೆಂಗಳೂರು, ನವೆಂಬರ್ 6: ಚಿನ್ನದ ಬೆಲೆಯ ಸತತ ಇಳಿಕೆ ಮುಂದುವರಿದಿದೆ. ಇಂದು ಬುಧವಾರ ಚಿನ್ನ ಮತ್ತು ಬೆಳ್ಳಿ ಎರಡೂ ಬೆಲೆ ಅಲ್ಪ ಪ್ರಮಾಣದಲ್ಲಿ ಕಡಿಮೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 1 ರೂ ಇಳಿಕೆಯಾದರೆ, ಬೆಳ್ಳಿ ಬೆಲೆ 10 ಪೈಸೆ ಕಡಿಮೆ ಆಗಿದೆ. ಆದರೆ, ವಿದೇಶದ ಮಾರುಕಟ್ಟೆಗಳಲ್ಲಿ ಬಹುತೇಕ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 73,540 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 80,230 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,590 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 73,540 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,590 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 6ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,540 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,230 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,170 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 95.90 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,540 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,230 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 95.90 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 73,540 ರೂ
  • ಚೆನ್ನೈ: 73,540 ರೂ
  • ಮುಂಬೈ: 73,540 ರೂ
  • ದೆಹಲಿ: 73,690 ರೂ
  • ಕೋಲ್ಕತಾ: 73,540 ರೂ
  • ಕೇರಳ: 73,540 ರೂ
  • ಅಹ್ಮದಾಬಾದ್: 73,590 ರೂ
  • ಜೈಪುರ್: 73,690 ರೂ
  • ಲಕ್ನೋ: 73,690 ರೂ
  • ಭುವನೇಶ್ವರ್: 73,540 ರೂ

ಇದನ್ನೂ ಓದಿ: Petrol Diesel Price on November 06: ಭಾರತದಾದ್ಯಂತ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,680 ರಿಂಗಿಟ್ (70,490 ರುಪಾಯಿ)
  • ದುಬೈ: 3,070 ಡಿರಾಮ್ (70,350 ರುಪಾಯಿ)
  • ಅಮೆರಿಕ: 820 ಡಾಲರ್ (69,030 ರುಪಾಯಿ)
  • ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (69,950 ರುಪಾಯಿ)
  • ಕತಾರ್: 3,080 ಕತಾರಿ ರಿಯಾಲ್ (71,130 ರೂ)
  • ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,130 ರುಪಾಯಿ)
  • ಓಮನ್: 324.50 ಒಮಾನಿ ರಿಯಾಲ್ (70,950 ರುಪಾಯಿ)
  • ಕುವೇತ್: 248.30 ಕುವೇತಿ ದಿನಾರ್ (68,040 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,590 ರೂ
  • ಚೆನ್ನೈ: 10,490 ರೂ
  • ಮುಂಬೈ: 9,590 ರೂ
  • ದೆಹಲಿ: 9,590 ರೂ
  • ಕೋಲ್ಕತಾ: 9,590 ರೂ
  • ಕೇರಳ: 10,490 ರೂ
  • ಅಹ್ಮದಾಬಾದ್: 9,590 ರೂ
  • ಜೈಪುರ್: 9,590 ರೂ
  • ಲಕ್ನೋ: 9,590 ರೂ
  • ಭುವನೇಶ್ವರ್: 10,490 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us