Gold Silver Price on 7 November: ಚಿನ್ನದ ಬೆಲೆ ಇಳಿಕೆ, ಬೆಳ್ಳಿ ತುಸು ದುಬಾರಿ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2023, November 7th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,470 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.20 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,350 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 7 November: ಚಿನ್ನದ ಬೆಲೆ ಇಳಿಕೆ, ಬೆಳ್ಳಿ ತುಸು ದುಬಾರಿ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
Edited By:

Updated on: Nov 07, 2023 | 5:00 AM

ಬೆಂಗಳೂರು, ನವೆಂಬರ್ 7: ಈ ವಾರ ಆಭರಣಪ್ರಿಯರಿಗೆ ಖುಷಿಕೊಡುವಂತೆ ಚಿನ್ನದ ಬೆಲೆಯಲ್ಲಿ (Gold and silver Rates) ಇಳಿಕೆ ಆಗಿದೆ. ಭಾರತದ ಬಹುತೇಕ ಕಡೆ ಚಿನ್ನ ತುಸು ಅಗ್ಗಗೊಂಡಿದೆ. ವಿದೇಶಗಳಲ್ಲಿ ಕೆಲ ಕಡೆ ಹೊರತುಪಡಿಸಿ ಉಳಿದ ಕಡೆ ಬೆಲೆ ಇಳಿಕೆಯಾಗಿದೆ. ಒಂದೆಡೆ ಚಿನ್ನದ ಬೆಲೆ ಇಳಿದರೆ ಬೆಳ್ಳಿ ಮೌಲ್ಯ ಹೆಚ್ಚಿಸಿಕೊಂಡಿದೆ. ಬೆಂಗಳೂರು ಹೊರತುಪಡಿಸಿ ಉಳಿದ ಭಾರತೀಯ ನಗರಗಳಲ್ಲಿ ಬೆಳ್ಳಿ ಬೆಲೆಯಲ್ಲಿ ತುಸು ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,470 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,520 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 7ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,470 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 752 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,470 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,350 ರೂ
  • ಚೆನ್ನೈ: 57,000 ರೂ
  • ಮುಂಬೈ: 56,350 ರೂ
  • ದೆಹಲಿ: 56,500 ರೂ
  • ಕೋಲ್ಕತಾ: 56,350 ರೂ
  • ಕೇರಳ: 56,350 ರೂ
  • ಅಹ್ಮದಾಬಾದ್: 56,400 ರೂ
  • ಜೈಪುರ್: 56,500 ರೂ
  • ಲಕ್ನೋ: 56,500 ರೂ
  • ಭುವನೇಶ್ವರ್: 56,350 ರೂ

ಇದನ್ನೂ ಓದಿ: Arecanut Price 06 Nov: ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಮತ್ತು ಕೋಕೋ ದರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (53,480 ರುಪಾಯಿ)
  • ದುಬೈ: 2,227.50 ಡಿರಾಮ್ (50,466 ರುಪಾಯಿ)
  • ಅಮೆರಿಕ: 610 ಡಾಲರ್ (50,765 ರುಪಾಯಿ)
  • ಸಿಂಗಾಪುರ: 837 ಸಿಂಗಾಪುರ್ ಡಾಲರ್ (51,634 ರುಪಾಯಿ)
  • ಕತಾರ್: 2,290 ಕತಾರಿ ರಿಯಾಲ್ (52,258 ರೂ)
  • ಸೌದಿ ಅರೇಬಿಯಾ: 2,290 ಸೌದಿ ರಿಯಾಲ್ (50,792 ರುಪಾಯಿ)
  • ಓಮನ್: 242 ಒಮಾನಿ ರಿಯಾಲ್ (52,301 ರುಪಾಯಿ)
  • ಕುವೇತ್: 191.50 ಕುವೇತಿ ದಿನಾರ್ (51,626 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,820 ರೂ
  • ಮುಂಬೈ: 7,520 ರೂ
  • ದೆಹಲಿ: 7,520 ರೂ
  • ಕೋಲ್ಕತಾ: 7,520 ರೂ
  • ಕೇರಳ: 7,820 ರೂ
  • ಅಹ್ಮದಾಬಾದ್: 7,520 ರೂ
  • ಜೈಪುರ್: 7,520 ರೂ
  • ಲಕ್ನೋ: 7,520 ರೂ
  • ಭುವನೇಶ್ವರ್: 7,820 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Web contact

TV9 Kannada

Read More
Follow Us