AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 7th November: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಕುಸಿತ

Bullion Market 2024 November 7th: ಆಭರಣ ಚಿನ್ನದ ಬೆಲೆ ಇಂದು ಗುರುವಾರ 7,200 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 7,856 ರೂ ಆಗಿದೆ. 18 ಕ್ಯಾರಟ್ ಚಿನ್ನದ ಬೆಲೆ 5,900 ರೂ ಮಟ್ಟಕ್ಕಿಂತ ಕೆಳಗೆ ಇಳಿದಿದೆ. ಬೆಳ್ಳಿ ಬೆಲೆ 96 ರೂ ಇದ್ದದ್ದು 93 ರೂಗೆ ಇಳಿದಿದೆ. ಚೆನ್ನೈ, ಕೇರಳ ಮೊದಲಾದೆಡೆ ಬೆಳ್ಳಿ ಬೆಲೆ 102 ರೂಗೆ ಇಳಿದಿದೆ.

Gold Silver Price on 7th November: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಕುಸಿತ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Nov 07, 2024 | 10:29 AM

Share

ಬೆಂಗಳೂರು, ನವೆಂಬರ್ 7: ಅಮೆರಿಕದಲ್ಲಿ ಡೊನಾಲ್ಡ್​ ಟ್ರಂಪ್ ಅಧ್ಯಕ್ಷರಾದ್ದರ ಎಫೆಕ್ಟ್ ಎಂಬಂತೆ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಭಾರೀ ಇಳಿಕೆ ಕಂಡಿದೆ. ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್​ಗೆ 165 ರೂನಷ್ಟು ಭರ್ಜರಿ ಕುಸಿತ ಕಂಡಿದೆ. ಅಪರಂಜಿ ಚಿನ್ನದ ಬೆಲೆ ಬರೋಬ್ಬರಿ 173 ರೂನಷ್ಟು ಕಡಿಮೆ ಆಗಿದೆ. ಇತ್ತೀಚಿನ ದಿನಗಳಲ್ಲಿ ಒಂದು ದಿನದಲ್ಲಿ ಚಿನ್ನದ ಬೆಲೆ ಕಂಡ ಅತಿ ಹೆಚ್ಚು ಕುಸಿತಗಳಲ್ಲಿ ಇವತ್ತಿನದ್ದೂ ಒಂದು. ಬೆಲೆ ಕುಸಿತದಲ್ಲಿ ಚಿನ್ನಕ್ಕೆ ಬೆಳ್ಳಿಯೂ ಪೈಪೋಟಿ ನೀಡಿದೆ. ಇಂದು ಬೆಳ್ಳಿ ಬೆಲೆ ಗ್ರಾಮ್​ಗೆ 3 ರೂನಷ್ಟು ಇಳಿಕೆ ಕಂಡಿದೆ. ಬೆಂಗಳೂರು ಮೊದಲಾದೆಡೆ ಬೆಳ್ಳಿ ಬೆಲೆ 93 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 72,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 78,560 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 72,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 7ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,560 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,910 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 93 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,560 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 93 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 72,000 ರೂ
  • ಚೆನ್ನೈ: 72,000 ರೂ
  • ಮುಂಬೈ: 72,000 ರೂ
  • ದೆಹಲಿ: 72,150 ರೂ
  • ಕೋಲ್ಕತಾ: 72,000 ರೂ
  • ಕೇರಳ: 72,000 ರೂ
  • ಅಹ್ಮದಾಬಾದ್: 72,050 ರೂ
  • ಜೈಪುರ್: 72,150 ರೂ
  • ಲಕ್ನೋ: 72,150 ರೂ
  • ಭುವನೇಶ್ವರ್: 72,000 ರೂ

ಇದನ್ನೂ ಓದಿ: Petrol Diesel Price on November 07: ಕಚ್ಚಾತೈಲ ಬೆಲೆ ಇಳಿಕೆ, ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆಯಾಗಿದೆಯೇ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,680 ರಿಂಗಿಟ್ (70,290 ರುಪಾಯಿ)
  • ದುಬೈ: 3,070 ಡಿರಾಮ್ (70,450 ರುಪಾಯಿ)
  • ಅಮೆರಿಕ: 820 ಡಾಲರ್ (69,120 ರುಪಾಯಿ)
  • ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (70,240 ರುಪಾಯಿ)
  • ಕತಾರ್: 3,080 ಕತಾರಿ ರಿಯಾಲ್ (71,210 ರೂ)
  • ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,200 ರುಪಾಯಿ)
  • ಓಮನ್: 324.50 ಒಮಾನಿ ರಿಯಾಲ್ (71,030 ರುಪಾಯಿ)
  • ಕುವೇತ್: 248.30 ಕುವೇತಿ ದಿನಾರ್ (68,190 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,300 ರೂ
  • ಚೆನ್ನೈ: 10,200 ರೂ
  • ಮುಂಬೈ: 9,300 ರೂ
  • ದೆಹಲಿ: 9,300 ರೂ
  • ಕೋಲ್ಕತಾ: 9,300 ರೂ
  • ಕೇರಳ: 10,200 ರೂ
  • ಅಹ್ಮದಾಬಾದ್: 9,300 ರೂ
  • ಜೈಪುರ್: 9,300 ರೂ
  • ಲಕ್ನೋ: 9,300 ರೂ
  • ಭುವನೇಶ್ವರ್: 10,200 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:28 am, Thu, 7 November 24

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ