ಬೆಂಗಳೂರು, ನವೆಂಬರ್ 7: ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾದ್ದರ ಎಫೆಕ್ಟ್ ಎಂಬಂತೆ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಭಾರೀ ಇಳಿಕೆ ಕಂಡಿದೆ. ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್ಗೆ 165 ರೂನಷ್ಟು ಭರ್ಜರಿ ಕುಸಿತ ಕಂಡಿದೆ. ಅಪರಂಜಿ ಚಿನ್ನದ ಬೆಲೆ ಬರೋಬ್ಬರಿ 173 ರೂನಷ್ಟು ಕಡಿಮೆ ಆಗಿದೆ. ಇತ್ತೀಚಿನ ದಿನಗಳಲ್ಲಿ ಒಂದು ದಿನದಲ್ಲಿ ಚಿನ್ನದ ಬೆಲೆ ಕಂಡ ಅತಿ ಹೆಚ್ಚು ಕುಸಿತಗಳಲ್ಲಿ ಇವತ್ತಿನದ್ದೂ ಒಂದು. ಬೆಲೆ ಕುಸಿತದಲ್ಲಿ ಚಿನ್ನಕ್ಕೆ ಬೆಳ್ಳಿಯೂ ಪೈಪೋಟಿ ನೀಡಿದೆ. ಇಂದು ಬೆಳ್ಳಿ ಬೆಲೆ ಗ್ರಾಮ್ಗೆ 3 ರೂನಷ್ಟು ಇಳಿಕೆ ಕಂಡಿದೆ. ಬೆಂಗಳೂರು ಮೊದಲಾದೆಡೆ ಬೆಳ್ಳಿ ಬೆಲೆ 93 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 72,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 78,560 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 72,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,300 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Petrol Diesel Price on November 07: ಕಚ್ಚಾತೈಲ ಬೆಲೆ ಇಳಿಕೆ, ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆಯಾಗಿದೆಯೇ?
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 10:28 am, Thu, 7 November 24